ಮಂಗಳೂರು ಗುಂಪು ಹತ್ಯೆ ಘಟನೆ: ಇನ್ಸ್‌ಪೆಕ್ಟರ್ ಸೇರಿ ಮೂವರು ಅಮಾನತು

Date:

ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಏ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್ ‌ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.

ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್ ಎಂಬ ಯುವಕನನ್ನು ಗುಂಪು ಥಳಿಸಿ ಹತ್ಯೆಗೈದಿತ್ತು. ಪ್ರಕರಣ ಬೆಳಕಿಗೆ ಬಂದರೂ ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆಕ್ಷೇಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು 20 ಮಂದಿ ಆರೋಪಿಗಳನ್ನು ‌ಬಂಧಿಸಿದ್ದರು‌.

ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಏ.27ರಂದು ಕುಡುಪುವಿನ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸಮಯ ಓರ್ವ ಅಪರಿಚಿತ ವ್ಯಕ್ತಿಗೆ, ಆಟಗಾರರು ಮತ್ತು ಅಲ್ಲಿ ನರೆದಿದ್ದ ಪ್ರೇಕ್ಷಕರು ಗುಂಪು ಹಲ್ಲೆ ನಡೆಸುತ್ತಿದ್ದ ಕುರಿತು ದೀಪಕ್ ಎಂಬುವರು ಪೊಲೀಸರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್, ಸಿಬ್ಬಂದಿಗಳಿಗೆ ಮಾಹಿತಿ ಬಂದಿತ್ತು. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಇದ್ದರೂ ಗುಂಪು ಹತ್ಯೆಯ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿಲ್ಲ ಎನ್ನಲಾಗಿದೆ.

ಮೊದಲು ಈ ಪ್ರಕರಣವನ್ನು ಯುಡಿಆರ್ ಪ್ರಕರಣವಾಗಿ ದಾಖಲಿಸಿ, ಮುಚ್ಚುವುದಕ್ಕೆ ಪ್ರಯತ್ನಪಟ್ಟ ಆರೋಪ ಕೇಳಿಬಂದಿತ್ತು. ಸಾಮಾಜಿಕ ಹೋರಾಟಗಾರರ ಒತ್ತಡದ ಬಳಿಕ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಬೆನ್ನಲ್ಲೇ, ಗುಂಪು ಹತ್ಯೆ ಪ್ರಕರಣವಾಗಿ ಪೊಲೀಸರು ದೂರು ದಾಖಲಿಸಿಕೊಂಡು, ಈವರೆಗೆ 20 ಮಂದಿಯನ್ನು ಬಂಧಿಸಿದ್ದಾರೆ.

ಗುಂಪು ಹತ್ಯೆಯ ಬಗ್ಗೆ ಮಾಹಿತಿ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತಾರದೇ ತೀವ್ರ ಕರ್ತವ್ಯ ನಿರ್ಲಕ್ಷತನ ತೋರಿದ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್‌ಸ್ಪೆಕ್ಟರ್ ಅಮಾನತುಗೊಳಿಸಲು ಗೃಹ ಸಚಿವರಿಗೆ ಸಚಿವ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪತ್ರ

ವಲಸೆ ಕಾರ್ಮಿಕನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ, ಉನ್ನತಮಟ್ಟದ ತನಿಖೆ ನಡೆಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೃಹ ಸಚಿವರಿಗೆ ಪತ್ರ ಬರೆದಿದ್ದರು.

ಹಾಗೆಯೇ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪುರುಷೋತ್ತಮ್ ಚಿತ್ರಾಪುರ ಅವರು ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಮಾಹಿತಿ ಇದ್ದರೂ ಕೂಡ ಮಂಗಳೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರಾದ ಶಿವಪ್ರಸಾದ್ ಸರಿಯಾಗಿ ಕರ್ತವ್ಯ ನಿರ್ವಹಿಸಿಲ್ಲ.‌ ಹಾಗಾಗಿ, ಅಮಾನತು ಮಾಡಿ, ಉನ್ನತ ಮಟ್ಟದ ತನಿಖೆ ನಡೆಸಲು ಕೋರಿದ್ದರು.

image 50
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...