ದಕ್ಷಿಣ ಕನ್ನಡ | ಅಧಿಕಾರಿಗಳ ಕಾರ್ಯಾಚರಣೆ; ಕೂಡಿ ಹಾಕಲಾಗಿದ್ದ ಮಹಿಳೆ ರಕ್ಷಣೆ

Date:

ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಎಂಬಲ್ಲಿ ಮಹಿಳೆಯೊಬ್ಬರನ್ನು ಕೂಡಿ ಹಾಕಲಾಗಿತ್ತು. ಆಕೆಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಶಾ ಎಂಬುವವರನ್ನು ವಿದ್ಯುತ್ ಸಂಪರ್ಕವಾಗಲೀ, ಕಿಟಕಿಯಾಗಲೀ ಇಲ್ಲದ ಸೆಮೆಂಟ್ ಶೀಟ್‌ ಮನೆಯಲ್ಲಿ ಕೂಡಿ ಹಾಕಲಾಗಿತ್ತು. ಆ ಬಗ್ಗೆ ಪೊಲೀಸರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮಹಿಳೆಯರನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯನ್ನು ರಕ್ಷಿಸಿದ ವೇಳೆ, ಆಕೆ ನಡೆಯಲಾಗದ ಮತ್ತು ಮಾತನಾಡಲಾಗದ ಪರಿಸ್ಥಿತಿಯಲ್ಲಿದ್ದರು. ಆಕೆಯನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮಹಿಳೆಯ ಪತಿ ಶ್ರೀಪತಿ ಹೆಬ್ಬಾರ್ ಎಂಬಾತನನ್ನು ಸಂಪರ್ಕಿಸಲು ಅಧಿಕಾರಿಗಳು ಯತ್ನಿಸಿದ್ದಾರೆ. ಆದರೆ, ಆತ ಫೋನ್‌ ಕರೆಯ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ. ಪೂರ್ಣ ತನಿಖೆಯ ಬಳಿಕ ಆಕಯನ್ನು ಬಂಧನದಲ್ಲಿಡಲು ಕಾರಣವೇನು ಎಂಬುದು ತಿಳಿಯಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...