ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಇಂದ ಬಹುಮಾನ

Date:

ಬಿಜೆಪಿ, ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಘೋಷಿಸಿದೆ. ಆರೋಪಿಗಳು ಸುಳಿವು ಸಿಕ್ಕಲ್ಲಿ ಎನ್‌ಐಎಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡಲಾಗುತ್ತದೆ ಮತ್ತು ಸುಳಿವು ನೀಡಿದವರ ವಿವರವನ್ನು ಗೌಪ್ಯವಾಗಿ ಇರಿಸಲಾಗುತ್ತದೆ ಎಂದು ಎನ್‌ಐಎ ಟ್ವೀಟ್ ಮಾಡಿದೆ.

ಪ್ರಕರಣದ 15ನೇ ಆರೋಪಿ ಮೊಹಮ್ಮದ್ ಮುಸ್ತಫಾ, 16ನೇ ಆರೋಪಿ ಮಸೂದ್ ಅಂಗಡಿ, 17ನೇ ಆರೋಪಿ ಮೊಹಮ್ಮದ್ ಶರೀಫ್, 18ನೇ ಆರೋಪಿ ಉಮರ್ ಆರ್ ಹಾಗೂ 19ನೇ ಆರೋಪಿ ಅಬೂಬಕ್ಕರ್ ಸಿದ್ದಿಕಿ ಕುರಿತು ಮಾಹಿತಿ ನೀಡುವಂತೆ ಎನ್‌ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಪ್ರವೀಣ್ ನೆಟ್ಟಾರು ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದರು. ಆತನ ಹತ್ಯೆ ಖಂಡಿಸಿ ಹಿಂದುತ್ವ ಕೋಮುವಾದಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಅಂದಿನ ಬಿಜೆಪಿ ಸರ್ಕಾರ ಮತ್ತು ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಠೀಲ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...