ಖಾಸಗಿ ಬಸ್‌ ಚಾಲಕನ ‘ರ್‍ಯಾಶ್‌ ಡ್ರೈವಿಂಗ್‌’; ಬಸ್‌ನಿಂದ ಹೊರಬಿದ್ದು ಮಹಿಳೆ ಸಾವು

Date:

ಖಾಸಗಿ ಬಸ್‌ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ 65 ವರ್ಷದ ಈರಮ್ಮ ಸಾವನ್ನಪ್ಪಿದ್ದಾರೆ.

ಈರಮ್ಮ ಅವರು ತನ್ನ ಮಗಳೊಂದಿಗೆ ಖಾಸಗಿ ಬಸ್‌ನಲ್ಲಿ ಸುರತ್ಕಲ್‌ಗೆ ತೆರಳುತ್ತಿದ್ದರು. ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್‌ ಸಮೀಪ ಬಸ್‌ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ, ಚಾಲಕನ ಪಕ್ಕದ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ಮೇಲೆ ಬಸ್‌ನ ಹಿಂದಿನ ಚಕ್ರ ಹರಿದಿದ್ದು, ಈರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳೂರು ಸಂಚಾರ ಪೊಲೀಸರು ಬಸ್ ಚಾಲಕ ಅನಿಲ್ ಜಾನ್ ಲೋಬೋ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...