ಕೋರ್ಟಿಗೆ ಶರಣಾದ ರೌಡಿಶೀಟರ್ ಭರತ್ ಕುಮ್ಡೇಲು; ಅ. 25ರವರೆಗೆ ನ್ಯಾಯಾಂಗ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿ ಶೀಟರ್ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಈತ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಆ ಘಟನೆಗೆ ಸಂಬಂಧವೇ ಇಲ್ಲದ ಅಮಾಯಕ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಅವರನ್ನು ನಿರ್ಮಾಣ ಹಂತದ ಮನೆಗೆ ಮರಳು ಬೇಕು ಎಂದು ಕರೆಸಿಕೊಂಡ ಕೊಲೆಗಡುಕರ ತಂಡ ಅಲ್ಲಿಗೆ ತಲುಪುತ್ತಿದ್ದಂತೆ ಕೊಚ್ಚಿ ಹಾಕಿತ್ತು. ಈ ಪ್ರಕರಣದಲ್ಲೂ ಆರೋಪಿ ಭರತ್ ಕುಮ್ಡೇಲ್ ಭಾಗಿಯಾಗಿದ್ದ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುಷ್ಕರ್ಮಿಗಳು ಅಬ್ದುಲ್ ರಹ್ಮಾನ್‌ನನ್ನು ಕೊಂದಿದ್ದರೆ, ರಹ್ಮಾನ್ ಜೊತೆಯಲ್ಲಿದ್ದ ಕಲಂದರ್ ಶಾಫಿಯ ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ಭರತ್ ಕುಮ್ಡೇಲು ಸುಮಾರು ನಾಲ್ಕುವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ ಬೆನ್ನಿಗೆ ಆರೋಪಿ ಶುಕ್ರವಾರ ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿಗೆ ಅ.25 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭರತ್ ಕುಮ್ಡೇಲು ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆಗಳಲ್ಲಿ ಸುಮಾರು 15 ಪ್ರಕರಣಗಳು ದಾಖಲಾಗಿದೆ.

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಕೃತ್ಯ ನಡೆದ ಬಳಿಕ ಪೊಲೀಸರು 14 ಮಂದಿ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ ಆ್ಯಕ್ಟ್)ಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ. ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ಶೃಂಗೇರಿ ಮೂಲದ ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್ ಯಾನೆ ಸಾಹಿತ್, ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ, ರಂಜಿತ್, ಭರತ್ ಕುಮ್ಡೇಲು ಭಾಗಿಯಾಗಿದ್ದು, ಎಲ್ಲರೂ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...