ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳಿಂದ ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿದೆ: ಕೆ ಯಾದವ ಶೆಟ್ಟಿ

Date:

ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾದ ಉದ್ಯೋಗ ಖಾತ್ರಿ ಯೋಜನೆಯನ್ನು ಕೂಡ ಕತ್ತು‌ ಹಿಸುಕಿ ಸಾಯಿಸಲು ಹೊರಟಿದೆ ಎಂದು ರೈತ, ಕಾರ್ಮಿಕ ಮುಖಂಡ ಕೆ ಯಾದವ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ CITU ನೇತೃತ್ವದಲ್ಲಿ ಜರುಗುತ್ತಿರುವ ನಾಲ್ಕು ದಿನಗಳ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತರುತ್ತಿರುವುದರಿಂದ ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿದೆ. ಒಟ್ಟಿನಲ್ಲಿ ಕೇಂದ್ರ ಸರಕಾರದ ನಡೆ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದೆ” ಎಂದರು.

“ಕೇಂದ್ರ ಸರಕಾರದ ರೈತ- ಕಾರ್ಮಿಕ ವಿರೋದಿ ದೋರಣೆಯ ಖಂಡಿಸಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ‌ ಫೆ.12ರಂದು ನಡೆಯಲಿರುವ ಅಖಿಲ ಭಾರತ ಮಹಾಮುಷ್ಕರವನ್ನು ಬೆಂಬಲಿಸಿ ಈ ಪಾದಯಾತ್ರೆಗಳನ್ನು ನಡೆಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

CITU ದಕ್ಷಣ ಕನ್ನಡ ಜಿಲ್ಲಾಧ್ಯಕ್ಷ ಬಿ ಎಂ ಭಟ್ ಮಾತನಾಡಿ, “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಾರ್ಮಿಕ‌ ವಿರೋಧಿ, ರೈತ ವಿರೋಧಿ ಮಾತ್ರವಲ್ಲ, ಭಾರತೀಯ ಪ್ರಜೆಗಳ ವಿರೋಧಿ ಸರಕಾರವಾಗಿದೆ. ಕಾರ್ಮಿಕರಿಗೆ ಇರುವ ಸಂಘ ಕಟ್ಟುವ ಹಕ್ಕು, ಅನ್ಯಾಯದ ವಿರುದ್ದ ಪ್ರತಿಭಟಿಸುವ ಹಕ್ಕು, ನ್ಯಾಯ ವೇತನ, ಸಮಾನ ವೇತನ, ಕೆಲಸದ ಮತ್ತು ಶಿಕ್ಷಣದ ಹಕ್ಕು ಮೊದಲಾದ ಸಂವಿಧಾನ ಬದ್ಧ ಹಕ್ಕುಗಳನ್ನೇ ಇಲ್ಲವಾಗಿಸಿದೆ. ಕಾರ್ಮಿಕರು‌ ತ್ಯಾಗ‌ ಹೋರಾಟಗಳಿಂದ‌ ಪಡೆದ‌ ಕಾನೂನುಗಳನ್ನು ರದ್ದು‌ ಪಡಿಸಿದ‌ ಮೋದಿ‌ ಸರಕಾರ ಮಾಲಿಕರ‌ ಪರವಾದ ಸಂಹಿತೆಗಳನ್ನು ಜಾರಿ ಮಾಡಿದೆ. ಈ‌ ಸಂಹಿತೆಗಳನ್ನು ಹಿಂಪಡೆಯುವವರೆಗೆ, ರದ್ದು ಪಡಿಸಿದ ನಮ್ಮ 29 ಕಾನೂನುಗಳನ್ನು ಮರು ಸ್ಥಾಪಿಸುವವರೆಗೆ ಹೋರಾಟ ನಿಲ್ಲದು. ಅಂದು ಸಾವರ್ಕರ್ ಬ್ರಿಟೀಶರ ಬೂಟು ನೆಕ್ಕಿ ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು ಭಾರತೀಯರಿಗೆ ಅವಮಾನ ಮಾಡಿದ್ದರೆ, ಇಂದು ನರೇಂದ್ರ ಮೋದಿ ಅದಾನಿ ಅಂಬಾನಿಯವರ ಕಾಲಿಗೆ ಬಿದ್ದಿದ್ದು ಕಾರ್ಮಿಕ‌ ವರ್ಗಕ್ಕೆ ದ್ರೋಹ ಎಸಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಜಾಥಾ ತಂಡದ ನಾಯಕಿ ಈಶ್ವರಿ ಪದ್ಮುಂಜ, ಜಯಶ್ರೀ, ಶ್ಯಾಮರಾಜ್, ಲೋಲಾಕ್ಷಿ ಬಂಟ್ವಾಳ, ಪುಷ್ಪ, ಧನಂಜಯ, ಅಭಿಷೇಕ್, ಅಧಿತಿ, ಫಾರೂಕ್, ಸುಕುಮಾರ್, ಅಶ್ವಿತ, ಲತಾ ಪುತ್ತೂರು, ಕುಮಾರಿ, ಅಜಿ ಎಂ ಜೋಸ್, ಸಲಿಮೋನ್, ಪ್ರದೀಪ್ ಕಳೆಂಜ, ನಜೀರ್ ಸೇರಿದಂತೆ ಹಲವರು ಇರಲಿದ್ದಾರೆ.

ಜ.29ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ನಗರದ ಅಂಬೇಡ್ಕರ್ ವೃತ್ತಕ್ಕೆ ತಲುಪಲಿರುವ ಈ ಪಾದಯಾತ್ರೆಯ ಜೊತೆಗೆ ಮೂಡುಬಿದ್ರೆ ತಲಪಾಡಿ ಮುಲ್ಕಿಯ ಪಾದಯಾತ್ರೆಗಳು ಸೇರಿ ಬಳಿಕ ಬೃಹತ್ ಮೆರವಣಿಗೆಯೊಂದಿಗೆ ಕ್ಲಾಕ್ ಟವರ್ ನತ್ತ ಹೆಜ್ಜೆ ಹಾಕಲಿದೆ. ನಂತರ ನಡೆಯುವ ಬಹಿರಂಗ ಸಭೆಯಲ್ಲಿ CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು CITU ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...