ಬೆಂಗಳೂರು ಕಾಲ್ತುಳಿತ: ಉಪ್ಪಿನಂಗಡಿ ಇಳಂತಿಲ ಮೂಲದ ವಿದ್ಯಾರ್ಥಿನಿ ಮೃತ್ಯು

Date:

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಆ ಪೈಕಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ. ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು. ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಅಲ್ಲದೆ ಉತ್ತಮ ಬಾಸ್ಕೆಟ್‌ ಬಾಲ್‌ ಕ್ರೀಡಾಪಟು ಕೂಡಾ ಆಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲ ವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ. ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಮಂಗಳೂರು | ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶ

ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ...

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...