ಪವಿತ್ರ ಅಹ್ಲನ್ ರಮದಾನ್ ತಿಂಗಳಿಗೆ ನಾವು ಯಾವ ರೀತಿಯಲ್ಲಿ ನಮ್ಮನ್ನು ಸಜ್ಜುಗೊಳಿಸಬೇಕು ಎಂಬುವುದರ ಕುರಿತು ಜಮಾಅತೆ ಇಸ್ಲಾಮೀ ಹಿಂದ್, ಸ್ಥಾನೀಯ ಸಮಿತಿಯ ಅಧ್ಯಕ್ಷ ಜನಾಬ್ ಉಮರ್ ಮೌಲವಿ ಮಡಿಕೇರಿ ವಿಶೇಷ ಪ್ರವಚನವನ್ನು ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಇಲ್ಲಿನ ಬ್ರೈಟ್ ಆಡಿಟೋರಿಯಂ ಸಭಾಂಗಣದಲ್ಲಿ ‘ಅಹ್ಲನ್ ರಮದಾನ್’ ಹೆಸರಿನಲ್ಲಿ ಪವಿತ್ರ ಮಾಸದ ಸಿದ್ಧತೆಗಾಗಿ ಹಮ್ಮಿಕೊಂಡಿದ್ದ ರಮಝಾನ್ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಅಬ್ದುಲ್ ಖಾದರ್ ಕುಕ್ಕಾಜೆಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು. ಜಮಾಅತೆ ಇಸ್ಲಾಮೀ ವಿಟ್ಲ ಇದರ ಅಧೀನದಲ್ಲಿರುವ ಮದರಸ ‘ವ್ಯಾಲ್ಯೂ ಎಜುಕೇಷನ್ ಸೆಂಟರ್‘ ಇದರ ಮುಖ್ಯ ಶಿಕ್ಷಕಿ ಶ್ರೀಮತಿ ರಾಬಿಯಾ ಅಬ್ದುಲ್ ರಹೀಮ್ ಅವರು ಈ ಮದರಸದ ಮಕ್ಕಳ ಅರಬಿ ಭಾಷಾ ಜ್ಞಾನ ಸೇರಿದಂತೆ ಶೈಕ್ಷಣಿಕ ವೈವಿಧ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಶಿರಸಿ | ಮಾರಿಕಾಂಬಾ ಜಾತ್ರೆಗೆ ಭರದ ಸಿದ್ಧತೆ: ಭಕ್ತರ ಸುರಕ್ಷತೆ ಕ್ರಮಗಳಿಗೆ ಸೂಚನೆ, ಸರ್ಕಾರಿ ಕಾಲೇಜಿಗೆ ₹3 ಕೋಟಿ ಅನುದಾನ
ಈ ಕಾರ್ಯಕ್ರಮವನ್ನು ನಿರೂಪಿಸಿದ, ಜ.ಇ. ಹಿಂದ್ ಇದರ ಸ್ಥಾನೀಯ ಅಧ್ಯಕ್ಷರು ಮತ್ತು ಅನುಗ್ರಹ ಮಹಿಳಾ ವಿದ್ಯಾಸಂಸ್ಥೆ, ಕಲ್ಲಡ್ಕ ಇದರ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಜನಾಬ್ ಯಾಸೀನ್ ಬೇಗ್ ಅವರು ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅಧ್ಯಯನ ಕೋರ್ಸ್‌ಗಳ ಬಗ್ಗೆ ವಿವರಣೆ ನೀಡಿದರು. ಈಗಾಗಲೇ 2026-27ರ ಶೈಕ್ಷಣಿಕ ವರ್ಷದ ದಾಖಲಾತಿ ಆರಂಭಿಸಿದ್ದು ಆಸಕ್ತ ವಿದ್ಯಾಥಿಗಳು ತ್ವರೆ ಮಾಡಿಕೊಳ್ಳುವಂತೆ ಕೇಳಿಕೊಂಡು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದವಿತ್ತರು.





