ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದು ನೋಡಿದ್ದೇವೆ: ಗ್ರಾಮಸ್ಥರಿಂದ 3ನೇ ದೂರು ದಾಖಲು

Date:

“ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ, ನಾವು ಭಯದಲ್ಲಿ ಬದುಕುತ್ತಿದ್ದೇವೆ” ಎಂದು ಮತ್ತೊಂದು ದೂರು ದಾಖಲಾಗಿದೆ. ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಮೇಲೆ ದಾಖಲಾಗಿರುವ ಮೂರನೇ ದೂರು ಇದಾಗಿದೆ.

ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ.‌ ಕಚೇರಿಗೆ ನೀಡಿರುವ ದೂರಿನ ಪ್ರತಿ ಈ ದಿನಕ್ಕೆ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮದ ಸಾಕ್ಷಿದಾರರು (ದೂರುದಾರರು) ದೂರು ನೀಡುವ ವೇಳೆ ಇದ್ದರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ಸ್ವೀಕರಿಸಿದ ಎಸ್.ಐ.ಟಿ. “ತಾವು ನೀಡಿದ ಅರ್ಜಿಯನ್ನು ಸ್ವೀಕರಿಸಿ, ಪರಿಶೀಲಿಸಿರುತ್ತೇವೆ. ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿಯನ್ನು/ದೂರನ್ನು ಸ್ಥಳೀಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು‌ ಸಲ್ಲಿಸುವುದು” ಎಂದು ಹಿಂಬರಹ ನೀಡಿ ಕಳುಹಿಸಿದೆ.

ದೂರಿನಲ್ಲಿ ಏನಿದೆ?

“ಧರ್ಮಸ್ಥಳದ ಗ್ರಾಮಸ್ಥರು ಮತ್ತು ಧರ್ಮಸ್ಥಳಕ್ಕೆ ಹೊಂದಿಕೊಂಡ ಪ್ರದೇಶದ ಗ್ರಾಮಸ್ಥರಾದ ನಾವು ನಿವೇದಿಸಿ ಕೊಳ್ಳುವುದೇನೆಂದರೆ, ನಾವು ಇಲ್ಲಿಯವರೆಗೆ ಭಯದಲ್ಲಿಯೇ ಬದುಕಿರುತ್ತೇವೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳ ನಿಷ್ಪಕ್ಷಪಾತ ತನಿಖೆಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಸ್ಥಾಪಿಸಲಾದ ವಿಶೇಷ ತನಿಖಾದಳವು ನಡೆಸುತ್ತಿರುವ ಕಾರ್ಯಾಚರಣೆಯು ನಮಗೆ ಭಯದಿಂದ ಹೊರಬರಲು ನೆರವಾಗುತ್ತಿದೆ” ಎಂದು ಗ್ರಾಮಸ್ಥರು ದೂರಿನಲ್ಲಿ ವಿವರಿಸಿದ್ದಾರೆ.

ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತು ಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ” ಎಂದು ತಿಳಿಸಿದ್ದಾರೆ.

“ಆತ ರಹಸ್ಯವಾಗಿ ಹೂತುಹಾಕಿರುವುದಾಗಿ ಭಾವಿಸಿದ್ದರೂ, ಗ್ರಾಮಗಳಲ್ಲಿ ಇಂತಹ ವಿಷಯಗಳು ರಹಸ್ಯವಾಗಿ ಉಳಿಯುವುದಿಲ್ಲವೆಂಬುದು ತಮಗೆ ತಿಳಿದಿರುತ್ತದೆ. ಜನರ ರಕ್ಷಣೆಗೆಂದು ಮಾನ್ಯಮುಖ್ಯಮಂತ್ರಿಗಳು ಸ್ಥಾಪಿಸಿರುವ ಈ‌ ವಿಶೇಷ ತನಿಖಾದಳಕ್ಕೆ ನಾವು ಸಹಕಾರ ನೀಡಲೇಬೇಕು ಎಂದು ತೀರ್ಮಾನಿಸಿರುತ್ತೇವೆ” ಎಂದಿದ್ದಾರೆ.

ಮೂರನೇ ದೂರು

ಇದನ್ನೂ ಓದಿ ‘ಭೂ ಹಗರಣಕ್ಕೂ ಸಾವುಗಳಿಗೂ ಸಂಬಂಧ ಇದೆ’- ಎಡಪಂಥೀಯರ ನಿಯೋಗದ ಮುಂದೆ ಧರ್ಮಸ್ಥಳ ಜನರ ಅಹವಾಲು

ಮುಂದುವರಿದು, “ದೂರುದಾರನು ತೋರಿಸುತ್ತಿರುವ ಸ್ಥಳಗಳಲ್ಲಿ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಮ್ಮನ್ನೂ ಒಳಪಡಿಸಲು ಕೋರುತ್ತೇವೆ. ಪ್ರತ್ಯೇಕವಾಗಿ ಆತನು ಹೂತು ಹಾಕುತ್ತಿದ್ದ ಸ್ಥಳಗಳನ್ನು ನಾವು ಎಲ್ಲೆಲ್ಲಿ ನೋಡಿದ್ದೇವೆ ಎಂದು ಸ್ವತಂತ್ರವಾಗಿ ತೋರಿಸುವ ಅವಕಾಶವನ್ನೂ ಕೋರುತ್ತೇವೆ” ಎಂದು ಮನವಿ ಮಾಡಿಕೊಂಡಿದ್ದಾರೆ

yathiraj 3
ಯತಿರಾಜ್‌ ಬ್ಯಾಲಹಳ್ಳಿ
+ posts

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.

ಪೋಸ್ಟ್ ಹಂಚಿಕೊಳ್ಳಿ:

ಯತಿರಾಜ್‌ ಬ್ಯಾಲಹಳ್ಳಿ
ಯತಿರಾಜ್‌ ಬ್ಯಾಲಹಳ್ಳಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...