ಕೋಲಾರ | ದಲಿತ ಹೋರಾಟಗಾರ ಕೊಮ್ಮಣ್ಣ ಎಂ ನಿಧನ

Date:

ದಲಿತ ಚಳವಳಿಯ ಮುಂಚೂಣಿ ಹೋರಾಟಗಾರರಾದ ಕೊಮ್ಮಣ್ಣ ಎಂ ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.

ದಲಿತ ಚಳವಳಿಗಳಲ್ಲಿ ಮುಂಚೂಣಿ ನಾಯಕರಾಗಿದ್ದ ಕೊಮ್ಮಣ್ಣ ಅವರು, ಹಲವು ತಿಂಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕೋಲಾರದ ಬಂಗಾರಪೇಟೆಯಲ್ಲಿ ಇಂಗ್ಲೀಷ್‌ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು, ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕೋಲಾರ ಹೊರವಲಯದ ತೇರಹಳ್ಳಿ ಬೆಟ್ಟದಲ್ಲಿರುವ ಆದಿಮ ಸಾಂಸ್ಕೃತಿಕ ಕೇಂದ್ರದ ಸಂಸ್ಥಾಪಕರಲ್ಲಿ ಒಬ್ಬರಾದ ಇವರು, ಹಲವು ವರ್ಷಗಳಿಂದ ಆದಿಮ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಹೋರಾಟಗಳಲ್ಲಿ ನಿರಂತರವಾಗಿ ಕ್ರಿಯಾಶೀಲರಾಗಿದ್ದ ಕೊಮ್ಮಣ್ಣ ಎಂ ಅವರು, ನಾಗಸಂದ್ರ ಭೂ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೊಮ್ಮಣ್ಣ ಅವರ ಅಗಲಿಕೆ ಬಹಳ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಎನ್‌ ಮುನಿಸ್ವಾಮಿ, ಹ.ಮಾ.ರಾಮಚಂದ್ರ, ಅರಿವು ಶಿವಪ್ಪ, ಜೆ ಜಿ ನಾಗರಾಜ್‌, ಅಮಾಸ‌ ಕೆ.ವಿ.ನಾಯಕ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಇವರಿಗೆ ಪತ್ನಿ, ಮಗ, ಅಣ್ಣ, ಇಬ್ಬರು ತಂಗಿಯರಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೋಲಾರದ ಸ್ವಗೃಹದಲ್ಲಿ ನಾಳೆ ಮಧ್ಯಾಹ್ನದವರೆಗೆ ಅಂತಿಮದರ್ಶನ ಕಾರ್ಯ ನೆರವೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...