ವಿಜಯಪುರ | ಅಂಬೇಡ್ಕರ್ ಮೂರ್ತಿ ತೆರವುಗೊಳಿಸಿದ ಪಾಲಿಕೆ: ದಲಿತ ಸಂಘಟನೆಗಳಿಂದ ಪ್ರತಿಭಟನೆ

Date:

ವಿಜಯಪುರ ಮಹಾನಗರ ಪಾಲಿಕೆ ಹೊಸ ಕಟ್ಟಡದ ಒಳಗೆ ಶುಕ್ರವಾರ ರಾತ್ರೋರಾತ್ರಿ ಡಾ.ಬಿ.ಆರ್. ಪ್ರತಿಷ್ಠಾಪಿಸಲಾಗಿದ್ದ ಅಂಬೇಡ್ಕ‌ರ್ ಮೂರ್ತಿಯನ್ನು ಪಾಲಿಕೆ ಸಿಬ್ಬಂದಿ ಶನಿವಾರ ತೆರವುಗೊಳಿಸಿದ್ದರು.

ಅಂಬೇಡ್ಕ‌ರ್ ಮೂರ್ತಿಯನ್ನು ತೆರವುಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ದಲಿತ ಸಂಘಟನೆಗಳ ಮುಖಂಡರು ಮಹಾನಗರ ಪಾಲಿಕೆ ಆವರಣದಲ್ಲಿ ಧರಣಿ ನಡೆಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಅವರು ದಲಿತ ಮುಖಂಡರೊಂದಿಗೆ ಮಾತನಾಡಿ, ಪ್ರತಿಭಟನೆ ಮಾಡದಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳದೇ ಯಾವುದೇ ಮೂರ್ತಿ, ಫೋಟೊ ಅಳವಡಿಸಲು ಅವಕಾಶವಿಲ್ಲ. ನಿಗದಿತ ಸ್ಥಳದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಆಯುಕ್ತ ತಿಳಿಸಿದರು.

ಆಯುಕ್ತರ ಮಾತನ್ನು ಕೇಳದ ದಲಿತ ಸಂಘಟನೆಗಳ ಮುಖಂಡರು, ಡಾ. ಬಿ. ಆರ್.ಅಂಬೇಡ್ಕರ್ ಮೂರ್ತಿಯನ್ನು ನಿಗದಿತ ಸ್ಥಳದಲ್ಲಿ ಪ್ರತಿಷ್ಠಾಪಿಸುವವರೆಗೂ ಪ್ರತಿಭಟನೆ
ಕೈಬಿಡುವುದಿಲ್ಲ ಎಂದು ಹಠಹಿಡಿದರು.

ಒಂದು ವರ್ಷದಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡುತ್ತಾ ಬಂದರೂ ಪಾಲಿಕೆ ಆಯುಕ್ತರು, ಮೇಯರ್, ಉಪಮೇಯರ್ ಸ್ಪಂದಿಸಿಲ್ಲ. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಬದಲು ಯಾವುದೇ ಧರ್ಮಕ್ಕೆ ಸೇರಿದ ಮೂರ್ತಿ ಪ್ರತಿಷ್ಠಾಪನೆ ಬೇಡ ಎಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಹಾನಗರ ಪಾಲಿಕೆ ಮೇಯರ್ ಮೆಹಜಬಿನ್ ಅಬ್ದುಲ್ ರಜಾಕ್ ಹೊರ್ತಿ, ಉಪಮೇಯರ್ ದಿನೇಶ್ ಹಳ್ಳಿ, ಆಗಸ್ಟ್ 7ರಂದು ನಡೆಯಲಿರುವ ಮಹಾನಗರ ಪಾಲಿಕೆ ಸಾಮಾನ್ಯಸಭೆಯಲ್ಲಿ ಡಾ.ಬಿ. ಆರ್.ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪಾಲಿಕೆ ಕಟ್ಟಡದ ಒಳಗೆ ಯಾವುದೇ ಮೂರ್ತಿ ಪ್ರತಿಷ್ಠಾಪನೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಹೀಗಾಗಿ ಪಾಲಿಕೆ ಆವರಣದಲ್ಲಿ ಅವಕಾಶ ಕಲ್ಪಿಸಲಾಗುವುದು. ಪಾಲಿಗೆ ಕಟ್ಟಡದ ಒಳಗೆ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಇದ್ದ ಕಟ್ಟೆಯನ್ನು ತೆರವುಗೊಳಿಸಲಾಗುವುದೆಂದು ಹೇಳಿದರು.

ಮೇಯರ್, ಭರವಸೆ ಸಂಘಟನೆಗಳ ಉಪಮೇಯರ್ ಹಿನ್ನೆಲೆಯಲ್ಲಿ ಮುಖಂಡರು ಧರಣಿ ಅಂತ್ಯಗೊಳಿಸಿದರು.

1001185724

ದಲಿತ ಮುಖಂಡರಾದ ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು, ಶ್ರೀನಾಥ ಪೂಜಾರಿ, ಪರಶುರಾಮ ಚಲವಾದಿ, ಮಿತಿನ್, ಮಹಾದೇವ ಕಾಂಬಳೆ, ವೆಂಕಟೇಶ ವಗ್ಗೇನವರ, ಅನಿಲ ಹೊಸಮನಿ. ರಾಜೇಶ ತೊರವಿ ಮತ್ತಿತರರು ಸಂಧಾನಸಭೆಯಲ್ಲಿ ಪಾಲ್ಗೊಂಡಿದ್ದರು.

ದಲಿತ ಸಂಘಟನೆಗಳ ಮುಖಂಡರ ಪ್ರತಿಭಟನೆ ಹಿನ್ನೆಲೆಯಲ್ಲಿ ದಿನವಿಡೀ ಮಹಾನಗರ ಪಾಲಿಕೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...