ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ಗೆ ಅವಹೇಳನ: ದಲಿತ ಸೇನೆ ಮಹಿಳಾ ಘಟಕದಿಂದ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

Date:

ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆ ಮಹಿಳಾ ಘಟಕದ ವತಿಯಿಂದ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ‘ತಪ್ಪು ಮಾಡುವವರ ಅಪ್ಪ ನಾನೆ’, ‘ಗುಲಾಮರ ದೊಡ್ಡಪ್ಪ’, ‘ದಾಸ್ ಮಂಜುನಾಥ್ (ಕ್ರಿಸ್ಟೋಫರ್ ಚಕ್ರವರ್ತಿ)’ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ನಕಲಿ ಖಾತೆಗಳ ಮೂಲಕ ಕೆಟ್ಟ ಪದಗಳ ಬಳಕೆ, ಅವಹೇಳನಾಕಾರಿ ಬರಹಗಳು ಹಾಗೂ ಪ್ರಚೋದನಾಕಾರಿ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರಯತ್ನಿಸಲಾಗುತ್ತಿದೆ. ಇಂತಹ ಕೃತ್ಯಗಳು ಸಂವಿಧಾನ ವಿರೋಧಿ ಹಾಗೂ ಸಮಾಜದ ಶಾಂತಿಗೆ ಭಾರೀ ಧಕ್ಕೆ ಉಂಟುಮಾಡುವಂತಹವುಗಳಾಗಿದ್ದು, ಸದರಿ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸೇನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪವಿತ್ರ ಜಿ, ‘ಡಾ.ಅಂಬೇಡ್ಕರ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಮುದಾಯಗಳ ನಡುವೆ ವೈಷಮ್ಯ ಮೂಡಿಸುವುದು ಗಂಭೀರ ಅಪರಾಧ. ಇಂತಹ ಸಮಾಜ ವಿರೋಧಿ ಶಕ್ತಿಗಳಿಗೆ ಕಾನೂನಿನ ಮೂಲಕ ಕಠಿಣ ಪಾಠ ಕಲಿಸಬೇಕು. ಸಾಮಾಜಿಕ ಜಾಲತಾಣಗಳ ದುರುಪಯೋಗಕ್ಕೆ ಕಡಿವಾಣ ಹಾಕುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದ್ದು, ಈ ಪ್ರಕರಣದಲ್ಲಿ ತಕ್ಷಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಕೆಯ ಸಂದರ್ಭದಲ್ಲಿ ದಲಿತ ಸೇನೆ ವಿಜಯಪುರ ಜಿಲ್ಲೆಯ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪ್ರಕಾಶ್ ಹೊಸಮನಿ, ಉತ್ತರ ಕರ್ನಾಟಕದ ಅಧ್ಯಕ್ಷ ಮಹೇಶ್ ಜಾಬನೂರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...