ವಿಜಯಪುರ | ಡೊನೇಷನ್‌ ಹಾವಳಿ ತಡೆಗೆ ದಲಿತ ವಿದ್ಯಾರ್ಥಿ ಪರಿಷತ್‌ ಆಗ್ರಹ

Date:

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಪ್ರಕಟವಾಗಿ ಮುಂದಿನ ಶಿಕ್ಷಣಕ್ಕೆ ಅಣಿಯಾಗುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಡೊನೇಷನ್ ಹಾವಳಿ ಎದುರಿಸುತ್ತಿದ್ದು, ಕೂಡಲೇ ಶಿಕ್ಷಣ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಈ ಕುರಿತು ದಲಿತ ವಿದ್ಯಾರ್ಥಿ ಪರಿಷತ್‌ ಮುಖಂಡ ಅಕ್ಷಯ್ ಕುಮಾರ್ ಅಜಮನಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಡೊನೇಷನ್ ಹಾವಳಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಕನಸು ಕಮರುತ್ತಿದೆ. ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕ ಪಡೆದು ಉತ್ತಮ ಶಿಕ್ಷಣ ನೀಡಬೇಕಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಹಣ ವಸೂಲಿ ಮಾಡುತ್ತಿವೆ. ಡೊನೇಷನ್ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದ್ದರೂ ಶಿಕ್ಷಣ ಇಲಾಖೆ ಯಾವುದೇ ಕ್ರಮಕೈಗೊಳ್ಳದೇ ಮೌನವಹಿಸಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಕಾಲೇಜುಗಳು ರೋಸ್ಟರ್ ಪದ್ಧತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಬೇಕು. ಸರಕಾರಿ ಕಾಲೇಜುಗಳ ಸಂಖ್ಯೆ ಹೆಚ್ಚಿಸಿ ಮೂಲಭೂತ ಸೌಲಭ್ಯ ಒದಗಿಸಬೇಕು. ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಪ್ರತಿನಿಧಿಗಳು, ಪೋಷಕರನ್ನು ಒಳಗೊಂಡ ಸಮಿತಿ ರಚಿಸಿ ಚರ್ಚಿಸಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಸಮಿತಿ ರಚಿಸಬೇಕು. ಕಾಲೇಜುಗಳ ಮಕ್ಕಳ ಸಂಖ್ಯೆ ಪ್ರಕಾರ ಸಂಸ್ಥೆಯ ಆದಾಯ ಕ್ರೋಢಿಕರಿಸಿ ಇಲಾಖೆಯೇ ಶುಲ್ಕ ನಿಗದಿ ಮಾಡಬೇಕು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.

“ವಿದ್ಯಾರ್ಥಿ ಹಾಗೂ ಪಾಲಕರಿಗೆ ಡೊನೇಷನ್ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಉಚಿತ ಸಹಾಯವಾಣಿ ಆರಂಭಿಸಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾರ್ಥಿಗಳ ಪೋಷಕರ ಸಹಭಾಗಿತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ಲಾನ್ ಬಿ ಬಗೆಗಿನ ಮಾತು ಮತ್ತು ನಾಯಕನ ಹಿಂದಿನ ನಾಯಕ

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಆನಂದ ಮುದೂರ, ಮಾದೇಶ ಛಲವಾದಿ, ಯಾಶಿನ್ ಇನಾಮದಾರ, ಯುವರಾಜ್ ಓಲೇಕಾರ್, ಅಜಯ್ ರಾಥೋಡ್, ಮಹಾಂತೇಶ್ ಛಲವಾದಿ, ಯಮನುರಿ ಮಾದರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...