ಬೀದರ್ | ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಮೇಲೆ ಹಲ್ಲೆ : ಯುವಕ ಸಾವು

Date:

ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನಲ್ಲಿ ನಡೆದಿದೆ.

ಕಮಲನಗರ ತಾಲ್ಲೂಕಿನ ಬೇಡಕುಂದಾ ಗ್ರಾಮದ ಸುಮೀತ್ (19) ಮೃತ ಯುವಕ.

ಬಿಎಸ್ಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಸುಮೀತ್ ಕಮಲನಗರ ತಾಲ್ಲೂಕಿನ ಗ್ರಾಮವೊಂದರ ಮೇಲ್ಜಾತಿಯ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ಡಿ.5 ರಂದು ಭೇಟಿ ಮಾಡಲು ಹುಡುಗಿಯ ಗ್ರಾಮಕ್ಕೆ ತೆರಳಿದ ವೇಳೆ ಸುಮೀತ್‌ನನ್ನು ಮನೆಯಲ್ಲಿ ಕೂಡಿ ಹಾಕಿ ಹುಡುಗಿಯ ತಂದೆ, ಸಹೋದರ ಹಾಗೂ ಸಂಬಂಧಿಕರು ಮನಬಂದಂತೆ ಥಳಿಸಿದ್ದಾರೆ. ಬಳಿಕ ಹುಡುಗನ ಪೋಷಕರಿಗೆ ವಿಷಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಭೀರವಾಗಿ ಗಾಯಗೊಂಡ ಸುಮೀತ್‌ನನ್ನು ಪೋಷಕರು ಮಹಾರಾಷ್ಟ್ರದ ಉದಗೀರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಲಾತೂರ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಕೊನೆಯುಸಿರೆಳೆದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೀದರ್ ಬಂದ್ : ನಾಳೆ ಶಾಲೆ, ಕಾಲೇಜುಗಳಿಗೆ ರಜೆ

ಘಟನೆ ಸಂಬಂಧ ಠಾಣಾ ಕುಶನೂರ ಠಾಣೆಯಲ್ಲಿ ಎಸ್ಸಿ , ಎಸ್ಟಿ ಜಾತಿ ದೌರ್ಜನ್ಯ ಕಾಯ್ದೆಯಡಿ ಬಾಲಕಿಯ ತಂದೆ, ಸಹೋದರನ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ‘ಈದಿನ.ಕಾಮ್‘ ಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆ ಎದುರು ಪ್ರತಿಭಟನೆ: ಲಾತೂರ್ ಆಸ್ಪತ್ರೆಯಿಂದ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಮೃತದೇಹ ತಂದು ಆಸ್ಪತ್ರೆ ಎದುರುಗಡೆ ಮೃತ ಯುವಕನ ಪೋಷಕರು, ವಿವಿಧ ಸಂಘಟನೆಗಳ ಮುಖಂಡರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಚ್.ಎಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...