ಕೋಲಾರ | ನಕಲಿ ದಾಖಲೆ ಸೃಷ್ಟಿಸಿ ದಲಿತರ ಭೂಕಬಳಿಕೆಗೆ ಯತ್ನ; ಸ್ಥಳೀಯರ ಆಕ್ರೋಶ

Date:

ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೊಕ್ಕಪುರ ಗ್ರಾಮಕ್ಕೆ ಸೇರಿದ ಸುಮಾರು 2.24 ಎಕರೆ ಭೂಮಿಯಲ್ಲಿ ನಾಲ್ಕೈದು ದಶಕಗಳಿಂದ ನೂರಾರು ಅನಕ್ಷರಸ್ಥ ದಲಿತ ಕುಟುಂಬಗಳು ಅನುಭವದಲ್ಲಿವೆ. ಕೆಲ ಕುಟುಂಬಗಳು ಈಗಾಗಲೇ ಮನೆ ಹಾಗೂ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದು, ಇನ್ನೂ ಕೆಲವರು ಅವರವರ ಜಾಗದಲ್ಲಿ ತಿಪ್ಪೆ, ಇತ್ಯಾದಿಗಳನ್ನು ಹಾಕಿಕೊಂಡು ನಿವೇಶಾನುಭವದಲ್ಲಿದ್ದಾರೆ.

ಹೀಗಿರುವಾಗ ನಿವೇಶನಾನುಭವದಲ್ಲಿರುವ ದಲಿತ ಕುಟುಂಬಗಳಿಗೆ ತಿಳಿಯದಂತೆ ಅಲ್ಲಿನ ಗ್ರಾಪಂ ಮಾಜಿ ಸದಸ್ಯರೊಬ್ಬರು ಜಾಗವನ್ನು ಖರೀದಿಸಿರುವಂತೆ ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದು, 2.24 ಎಕರೆ ಜಾಗವನ್ನು ದೌರ್ಜನ್ಯದಿಂದ ಪೊಲೀಸರ ರಕ್ಷಣೆಯಲ್ಲಿ ಒತ್ತುವರಿ ಮಾಡಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
chokkapura

ಚೊಕ್ಕಪುರ ಗ್ರಾಮ ನಕ್ಷೆಯ ಪ್ರಕಾರ ಆ ಜಾಗವು ಗ್ರಾಮಠಾಣಾ ಜಾಗವಾಗಿದ್ದು, ಇದೀಗ ಸ.ನಂಬರ್‌ 84 ಆಗಿ ಬದಲಾಗಿರುವುದು ದಶಕಗಳಿಂದ ಅದೇ ಜಾಗದಲ್ಲಿ ವಾಸವಿರುವ ದಲಿತ ಕುಟುಂಬಗಳನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.

ಅಧಿಕಾರಿಗಳ ಶಾಮೀಲು?:
ನಾಲ್ಕೈದು ದಶಕಗಳಿಂದ ವಾಸವಿರುವ ದಲಿತ ಕುಟುಂಬಗಳು ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಪಂದಿಸದಿರುವುದು, ಸ್ಥಳ ಪರಿಶೀಲನೆಯನ್ನೂ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧವಿಲ್ಲಬೆಂಬಂತೆ ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ತುಳಿತಕ್ಕೊಳಗಾದ, ಅನಕ್ಷರಸ್ಥ ಕುಟುಂಬಗಳಿಗೆ ರಕ್ಷಣೆ ಕೊಡಬೇಕಾದ ಪೊಲೀಸ್‌ ಇಲಾಖೆ ಅನ್ಯಾಯದ ಪರ ನಿಂತಿದೆ. ದಲಿತರ ಮನವಿಯನ್ನು ಲೆಕ್ಕಿಸದೆ ತಾಲೂಕು ಆಡಳಿತ, ಸರ್ವೆ ಇಲಾಖೆ, ಗ್ರಾಪಂ, ಪೊಲೀಸ್‌ ಇಲಾಖೆಗಳು ಜಾಣಮೌನಕ್ಕೆ ಜಾರಿರುವುದು ಅಧಿಕಾರಿಗಳು ಸಹ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಶಂಕೆಗೆ ಕಾರಣವಾಗಿದೆ.

chokkapura12

ಗ್ರಾಪಂ ವತಿಯಿಂದ ನಮೂನೆ-9, 11 ವಿತರಣೆ
ಸರ್ವೆ ನಂಬರ್‌ 84 ಎಂದು ಮಾರ್ಪಾಡಾಗಿರುವ ಜಾಗದಲ್ಲಿರುವ ಕೆಲ ದಲಿತ ಕುಟುಂಬಗಳಿಗೆ ಈಗಾಗಲೇ ಚೌಡದೇನಹಳ್ಳಿ ಗ್ರಾಪಂ ವತಿಯಿಂದ ನಮೂನೆ-9 ಮತ್ತು ನಮೂನೆ-11 ಸಹ ನೀಡಲಾಗಿದ್ದು, 40-50 ವರ್ಷಗಳಿಂದ ಅದೇ ಜಾಗದಲ್ಲಿ ನೆಲೆಸಿರುವ ದಲಿತರನ್ನು ಒಕ್ಕಲೆಬ್ಬೆಸಲು ಹುನ್ನಾರ ಮಾಡಲಾಗಿದೆ. ಈ ಕುರಿತು ತಹಶೀಲ್ದಾರ್‌, ಎಸಿ, ಡಿಸಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೂ ಮನವಿ ಸಲ್ಲಿಸಿದ್ದೂ ಇದೂವರೆಗೆ ಯಾರೂ ಸ್ಪಂದಿಸಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿ ರಂಗಣ್ಣ.

ಈ ಜಾಗವನ್ನು ಬೆಂಗಳೂರಿನ ವ್ಯಕ್ತಿಯೊಬ್ಬರಿಂದ ನಾನು ಖರೀದಿಸಿದ್ದೇನೆ. ಈಗಾಗಲೇ ಸರ್ವೇ ಕಾರ್ಯ ಮುಗಿದಿದ್ದು, ಅದರಂತೆ ನಮ್ಮ ಜಾಗಕ್ಕೆ ಕಾಂಪೌಂಡ್‌ ಗೋಡೆ ಕಟ್ಟಲು ಮುಂದಾಗಿದ್ದೇವೆ. ಅವರ ಬಳಿ ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ ಎನ್ನುತ್ತಾರೆ ಒತ್ತುವರಿಗೆ ಮುಂದಾಗಿರುವ ಗ್ರಾಪಂ ಮಾಜಿ ಸದಸ್ಯ ಸದಾನಂದ.

ಒಟ್ಟಾರೆಯಾಗಿ ನಾಲ್ಕೈದು ದಶಕಗಳಿಂದ ವಾಸವಿರುವ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದು ದಲಿತ ಕುಟುಂಬಗಳ ಒತ್ತಾಯವಾಗಿದೆ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...