ದಮ್ಮಾಮ್ | ಕಲ್ಲಡ್ಕ ಅಬ್ರಾಡ್ ಫೋರಂನಿಂದ ಎನ್.ಆರ್.ಐ ಮೀಟ್

Date:

ಕಲ್ಲಡ್ಕ ಅಬ್ರಾಡ್ ಫೋರಂ ವತಿಯಿಂದ ಗಲ್ಫ್ ಎನ್.ಆರ್. ಐ ಮೀಟ್ ಸಭೆಯು ಸೌದಿ ಅರೇಬಿಯಾದ ದಮ್ಮಾಮ್‌ನ ದಿಲ್ಮುನ್ ರೆಸಾರ್ಟ್‌ನಲ್ಲಿ ನಡೆಯಿತು.

ಸಮಾವೇಶದಲ್ಲಿ ಸೌದಿ ಅರೇಬಿಯಾದ ವಿವಿಧ ಪ್ರಾಂತ್ಯಗಳು, ಭಾರತ, ದುಬೈ, ಬಹರೈನ್‌ನಿಂದ ಅತಿಥಿಗಳು ಭಾಗವಹಿಸಿದ್ದರು. ಕಲ್ಲಡ್ಕ, ಗೋಳ್ತಮಜಲು, ಕೆ.ಸಿ ರೋಡ್ ಜಮಾತ್ ನ ನಾಯಕರುಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಎನ್.ಆರ್. ಐ ಮೀಟ್ ನಲ್ಲಿ ಪಾಲ್ಗೊಂಡಿದ್ದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಲ್ಲಡ್ಕ ಅಬ್ರಾಡ್ ಫೋರಮ್ ಸೌದಿ ಅರೇಬಿಯಾ ಅಧ್ಯಕ್ಷ ಮೊಹಮ್ಮದ್ ಫಿರೋಜ್, “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಅನಿವಾಸಿಗಳ ನೆರವಿಗಾಗಿ 2016ರಲ್ಲಿ ಕಲ್ಲಡ್ಕ ಅಬ್ರಾಡ್ ಫೋರಂ ಅನ್ನು ಸ್ಥಾಪಿಸಲಾಯಿತು. ದಕ್ಷಿಣ ಕನ್ನಡ ಮತ್ತು ಕೇರಳದಿಂದ ಬೃಹತ್ ಸಂಖ್ಯೆಯಲ್ಲಿ ಜನರು ಗಲ್ಫ್ ರಾಷ್ಟ್ರಗಳತ್ತ ಉದ್ಯೋಗಕ್ಕಾಗಿ ಬರಲಾರಂಭಿಸಿದ ಸಂದರ್ಭದಲ್ಲಿ ಕಲ್ಲಡ್ಕದಿಂದಲೂ ದೊಡ್ಡ ಸಂಖ್ಯೆಯ ಲ್ಲಿ ಗಲ್ಫ್ ರಾಷ್ಟ್ರಗಳಿಗೆ ಆಗಮಿಸಿದರು. ಕಲ್ಲಡ್ಕದಿಂದ ಆಗಮಿಸಿದ ಈ ಅನಿವಾಸಿಗಳನ್ನು ಒಗ್ಗೂಡಿಸಿ ಅವರು ಸೌದಿ ಅರೇಬಿಯಾದಲ್ಲಿ ಪರಸ್ಪರ ಹೇಗೆ ಸಹಕಾರವನ್ನು ವೃದ್ಧಿಸಿಕೊಳ್ಳಬಹುದು ಮತ್ತು ಕಲ್ಲಡ್ಕ ಜಮಾತ್ ನ ಒಟ್ಟು ಅಭಿವೃದ್ಧಿಯಲ್ಲಿ ಹೇಗೆ ಪಾಲ್ಗೊಳ್ಳುವಂತೆ ಮಾಡಬಹುದು ಎಂಬ ಚಿಂತನೆಯೊಂದಿಗೆ ಕಲ್ಲಡ್ಕ ಅಬ್ರಾಡ್ ಫೋರಮ್ ಸ್ಥಾಪಿಸಲಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿಥಿಗಳಾಗಿ ಭಾಗವಹಿಸಿದ್ದ ಅಲ್ ಅಖ್ದೋದ್ ಸಂಸ್ಥೆಯ ಅಧ್ಯಕ್ಷ ಹುಸೈನ್ ಅಲ್ ಯಾಮಿ ಮತ್ತು ಬ್ರೈಟ್ ಸಪೋರ್ಟ್ ಕಂಪನಿಯ ಅಧ್ಯಕ್ಷ ಅಲ್ ಉಸ್ಮಾನ್ ಅಲ್ ಝಹ್ರಾನಿ, “ಸೌದಿ ಅರೇಬಿಯಾವನ್ನು ಇಲ್ಲಿನ ಪ್ರಜೆಗಳು ಮಾತ್ರವಲ್ಲದೆ ಎಲ್ಲ ದೇಶಗಳ ಜನರು ಸೇರಿ ನಿರ್ಮಿಸಿದ್ದಾರೆ. ಹಿಂದೂ ಮುಸ್ಲಿಂ ಕ್ರೈಸ್ತರೆಂಬ ಭೇದ-ಭಾವವಿಲ್ಲದೆ ಎಲ್ಲ ಧರ್ಮಗಳ, ದೇಶಗಳ ಒಳ್ಳೆಯ ಮನಸ್ಸುಳ್ಳವರಿಗೆ ಸೇರಿದ್ದಾಗಿದೆ ಸೌದಿ ಅರೇಬಿಯಾ” ಎಂದು ಹೇಳಿದರು.

dammam 2

ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಕಲ್ಲಡ್ಕದ ಅಧ್ಯಕ್ಷ ಅಬ್ದುಲ್ಲಾ ಕೋಡಿ ಮಾತನಾಡಿ, “ಇದೊಂದು ಅವಿಸ್ಮರಣೀಯ ಕ್ಷಣವಾಗಿದೆ ಎಂದರು. ಇಂತಹ ಒಂದು ಸಮಾವೇಶವನ್ನು ಕೈಗೊಂಡದ್ದಕ್ಕಾಗಿ ಕಲ್ಲಡ್ಕ ಅಬ್ರಾಡ್ ಫೋರಮ್ ಅನ್ನು ಶ್ಲಾಘಿಸುತ್ತೇನೆ” ಎಂದು ತಿಳಿಸಿದರು.

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಗೋಳ್ತಮಜಲು ಇದರ ಅಧ್ಯಕ್ಷ ಹಾಗೂ 2024ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಮೆಯಾದ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, “ದುಬೈ, ಬಹರೈನ್ ಸೇರಿದಂತೆ ಜನರು ಪಾಲ್ಗೊಂಡ ಈ ಸಮಾವೇಶ ಐತಿಹಾಸಿಕವಾದುದು. ಜಮಾತ್ ವ್ಯವಸ್ಥೆ ಎಂಬುದು ಒಂದು ಶ್ರೇಷ್ಠ ವ್ಯವಸ್ಥೆಯಾಗಿದೆ. ಜಮಾತ್ ವ್ಯವಸ್ಥೆಯನ್ನು ಕೇವಲ ಧಾರ್ಮಿಕ ಕಾರ್ಯಗಳಿಗಾಗಿ ಸೀಮಿತಗೊಳಿಸದೆ ಜಮಾಅತ್‌ನ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಬಳಕೆಯಾಗಬೇಕು ಎಂದರು.

ಕಲ್ಲಡ್ಕ ಅಬ್ರಾಡ್ ಫೋರಂ ಯು.ಎ.ಇ ಅಧ್ಯಕ್ಷ ನವಾಜ್ ಗೋಳ್ತಮಜಲು, ಕಲ್ಲಡ್ಕ ಜಮಾತ್‌ನ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪನಾಮ, ಅಬ್ರಾಡ್ ಫೋರಂ ಉಪಾಧ್ಯಕ್ಷ ಜಾವೇದ್ ಕಲ್ಲಡ್ಕ, ಅಲ್ ಅಖ್ದೋದ್ ಕಂಪೆನಿ ಆಪರೇಷನ್ ಮ್ಯಾನೇಜರ್ ಉಮ್ಮರ್ ಫಾರೂಕ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಕಲ್ಲಡ್ಕ ಇತಿಹಾಸ, ಕಲ್ಲಡ್ಕ ಅಬ್ರಾಡ್ ಫೋರಮ್ ಸ್ಥಾಪನೆ ಹಾಗೂ ಉದ್ದೇಶವನ್ನೊಳಗೊಂಡ ಡಾಕ್ಯುಮೆಂಟರಿ ಪ್ರದರ್ಶಿಸಲಾಯಿತು. ಕಲ್ಲಡ್ಕ ಜಮಾತ್‌ನ ಸುಮಾರು ನೂರು ವರುಷಗಳ ಇತಿಹಾಸವನ್ನು ಕಾರ್ಯಕ್ರಮದಲ್ಲಿ ವಿವರಿಸಲಾಯಿತು. ನೂರು ವರುಷಗಳ ಹಿಂದೆ ಕಲ್ಲಡ್ಕ ಮಸೀದಿಯನ್ನು ನಿರ್ಮಿಸಿದ ಹಿರಿಯರಿಗೆ ಮತ್ತು ಆ ನಂತರದಲ್ಲಿ 1940ರಿಂದ 1965ರ ತನಕ ಜಮಾತ್ ಗಾಗಿ ಸೇವೆ ಸಲ್ಲಿಸಿದ ಮುಖಂಡರಿಗೆ ಮತ್ತು ಮುಸ್ಲಿಯಾರ್ ಗಳಿಗೆ ‘ಕಲ್ಲಡ್ಕ ರತ್ನ’ ಎಂಬ ಪದವಿ ನೀಡಿ ಗೌರವಿಸಲಾಯಿತು.

dammam 3

ಅಲ್ಲದೇ, ಇದೇ ವೇಳೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅವರನ್ನೂ ಕೂಡ ಸಮಾವೇಶದಲ್ಲಿ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ ದ್ವೇಷ ಭಾಷಣ

ಕಾರ್ಯಕ್ರಮದಲ್ಲಿ ಕಲ್ಲಡ್ಕ ಅಬ್ರಾಡ್ ಫೋರಂನ ಉಪಾಧ್ಯಕ್ಷರುಗಳಾದ ಫಾರೂಕ್ ಪೋರ್ಟ್ ವೇ ಮತ್ತು ಮುಜೀಬ್ ಕಲ್ಲಡ್ಕ, ಕಲ್ಲಡ್ಕ ಅಬ್ರಾಡ್ ಫೋರಮ್ ದುಬೈ ಘಟಕದ ಉಪಾಧ್ಯಕ್ಷ ರಫೀಕ್ ನೆಕ್ಕರಾಜೆ, ಗೋಳ್ತಮಜಲು ರಹ್ಮಾನಿಯಾ ಜುಮ್ಮಾ ಮಸ್ಜಿದ್ ನ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಮದಕ, ಕೆ.ಸಿ ರೋಡ್ ಜಮಾತ್ ಪ್ರಧಾನ ಕಾರ್ಯದರ್ಶಿ ಫವಾಜ್, ಕೆ.ಎನ್ ಬೇಕರಿ ಮಾಲಕ ನವಾಜ್, ಗೊಳ್ತಮಜಲು ಜಮಾತ್ ಕಮಿಟಿ ಇಕ್ಬಾಲ್ ಗೋಳ್ತಮಜಲು ಉಪಸ್ಥಿತರಿದ್ದರು.

ಇಮ್ತಿಯಾಝ್ ಗೋಳ್ತಮಜಲು, ಹಮೀದ್ ಗೊಳ್ತಮಜಲು ಮತ್ತು ಮೊಹಮ್ಮದ್ ಷರೀಫ್ ಕೆ.ಸಿ ರೋಡ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಲ್ಲಡ್ಕ ಅಬ್ರಾಡ್ ಫೋರಂನ ಕಾರ್ಯಕಾರಿ ಸಮಿತಿ ಸದಸ್ಯ ಅಕ್ಬರ್ ಸ್ವಾಗತಿಸಿ, ಜಾಬಿರ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...