ದಾಂಡೇಲಿ | ಅಜಿತ್ ನಾಯ್ಕ ಹತ್ಯೆ ಕೇಸ್: ಪ್ರಮುಖ ಆರೋಪಿ ದೋಷಿ ಎಂದು ತೀರ್ಪು, ಜನೆವರಿ 13ರಂದು ಶಿಕ್ಷೆ ಪ್ರಮಾಣ ಪ್ರಕಟ

Date:

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖ್ಯಾತ ವಕೀಲ ಹಾಗೂ ಜನಪರ ಹೋರಾಟಗಾರ ಅಜಿತ್ ನಾಯ್ಕ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿ ಪಾಂಡುರಂಗ ಮಾರುತಿ ಕಾಂಬಳೆ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.

ತೀರ್ಪಿನ ವಿವರ: ಶಿರಸಿಯ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಯಲ್ಲಾಪುರ ಪೀಠದಿಂದ ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಮುಖ ಆರೋಪಿ ದೋಷಿ ಎಂದು ಸಾಬೀತಾಗಿದ್ದರೂ, ಶಿಕ್ಷೆಯ ಪ್ರಮಾಣವನ್ನು ಜನವರಿ 13ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಪ್ರಕರಣದಲ್ಲಿದ್ದ ಇತರ ನಾಲ್ವರು ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

1000439115
ಸರ್ಕಾರಿ ಅಭಿಯೋಜಕ ರಾಜೇಶ್ ಎಂ ಮಳಗಿಕರ

ಅಜಿತ್ ನಾಯ್ಕ ಅವರು ಕೇವಲ ವಕೀಲರಷ್ಟೇ ಆಗಿರಲಿಲ್ಲ, ದಾಂಡೇಲಿ ತಾಲೂಕು ರಚನೆ ಹಾಗೂ ಪ್ರತ್ಯೇಕ ನ್ಯಾಯಾಲಯ ಸ್ಥಾಪನೆಗಾಗಿ ‘ದಾಂಡೇಲಿ ಬಚಾವೋ ಆಂದೋಲನ’ ನಡೆಸಿ 45 ದಿನಗಳ ಕಾಲ ಸತ್ಯಾಗ್ರಹ ಕೂತಿದ್ದ ದಿಟ್ಟ ಹೋರಾಟಗಾರರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಪ.ಜಾತಿ–ಪಂಗಡದವರಿಗೆ ಮೊದಲ ಆದ್ಯತೆ: ಎಡಿಸಿ ಸಾಜಿದ್ ಮುಲ್ಲಾ

2018ರಲ್ಲಿ ಅವರು ತಮ್ಮ ಕಚೇರಿಯ ಮುಂಭಾಗದಲ್ಲಿದ್ದಾಗಲೇ ಭೂ ಮಾಫಿಯಾದ ಸಂಚಿನಿಂದಾಗಿ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಜಮೀನು ವಿವಾದವೊಂದರಲ್ಲಿ ಮಾಲೀಕರ ಪರವಾಗಿ ಅಜಿತ್ ನಾಯ್ಕ ಅವರು ಗಟ್ಟಿಯಾಗಿ ನಿಂತಿದ್ದೇ ಅವರ ಹತ್ಯೆಗೆ ಕಾರಣವಾಗಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿದೆ.

ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ರಾಜೇಶ ಮಳಗೀಕರ ಅವರು ಅಜಿತ್ ನಾಯ್ಕ ಅವರ ಪರವಾಗಿ ಪ್ರಬಲವಾಗಿ ವಾದ ಮಂಡಿಸಿದ್ದರು. ಅಂದಿನ ಸಿಪಿಐ ಅನೀಸ್ ಮುಜಾವರ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರೆ, ಪಿ.ಸಿ. ಮಂಜುನಾಥ ಎಚ್. ಶೆಟ್ಟಿ ಅವರು ಸಹಾಯಕ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ವಕೀಲ ವೃಂದದ ಹಿರಿಯ ಸದಸ್ಯರೊಬ್ಬರ ಹತ್ಯೆ ಪ್ರಕರಣದಲ್ಲಿ ಕೊನೆಗೂ ನ್ಯಾಯ ಸಿಕ್ಕಿರುವುದು ದಾಂಡೇಲಿಯ ಜನತೆ ಹಾಗೂ ನ್ಯಾಯವಾದಿಗಳಲ್ಲಿ ಸಮಾಧಾನ ತಂದಿದೆ. ಜೈಲಿನಲ್ಲಿದ್ದ ಅವಧಿಯಲ್ಲೂ ಆರೋಪಿಗಳು ವಿವಾದಿತ ಜಮೀನು ಮಾರಾಟ ಮಾಡಲು ಯತ್ನಿಸಿದ್ದರು ಎನ್ನಲಾಗಿದ್ದು, ಪಿ.ಟಿ.ಸಿ.ಎಲ್ ಕಾಯ್ದೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...