ದಾಂಡೇಲಿ | ಜಿಲ್ಲಾ ಸಾಹಿತ್ಯ ಸಮ್ಮೇಳನ ವಿವಾದ: ಫ್ಲೆಕ್ಸ್‌ ತೆರವಿಗೆ ಕೋರ್ಟ್‌ ಆದೇಶ

Date:

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಆಯೋಜನೆಗೊಂಡಿರುವ 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಇದೀಗ ನ್ಯಾಯಾಲಯದ ಕಟಕಟೆಯನ್ನು ಏರಿದ್ದು, ಪ್ರಚಾರ ಸಾಮಗ್ರಿಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಮ್ಮೇಳನದ ಆಯೋಜನೆಗೆ ಸಂಬಂಧಿಸಿದ ಅನುಮತಿ ಮತ್ತು ದೇಣಿಗೆ ಸಂಗ್ರಹದಲ್ಲಿನ ಅಕ್ರಮಗಳ ಬಗ್ಗೆ ಸದಸ್ಯರು ಸಲ್ಲಿಸಿದ ದೂರಿನನ್ವಯ ಈ ಬೆಳವಣಿಗೆ ನಡೆದಿದೆ.

ಸಮ್ಮೇಳನದ ಆಯೋಜಕರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಜೀವ ಸದಸ್ಯರಾದ ಅಕ್ರಮ್ ಖಾನ್, ಸಂದೀಪ್ ಭಂಡಾರಿ ಹಾಗೂ ಪ್ರವೀಣ್ ಕೊಠಾರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜಿಲ್ಲಾ ಕಸಾಪ ಘಟಕವು ರಾಜ್ಯ ಅಧ್ಯಕ್ಷರ ಅನುಮತಿಯನ್ನು ಪಡೆಯದೆ ಕಾರ್ಯಕ್ರಮದ ಪ್ರಚಾರದಲ್ಲಿ ತೊಡಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುವಂತೆ ಫ್ಲೆಕ್ಸ್, ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲಾಗಿದೆ. ಜೊತೆಗೆ, ಕಸಾಪ ನಿಯಮಗಳನ್ನು ಉಲ್ಲಂಘಿಸಿ ದೇಣಿಗೆ ಸಂಗ್ರಹಣೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ದೂರನ್ನು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರಕರಣವು ಗುರುವಾರ ವಿಚಾರಣೆಗೆ ಬಂದಾಗ, ಜಿಲ್ಲಾ ಕಸಾಪ ಅಧ್ಯಕ್ಷ ಬೊಮ್ಮಯ್ಯ ಎನ್. ನಾಯಕ (ವಾಸರೆ) ಅವರಿಗೆ ಯಾವುದೇ ಸಮನ್ಸ್ ಜಾರಿಯಾಗದಿದ್ದರೂ, ಅವರು ತಮ್ಮ ವಕೀಲರೊಂದಿಗೆ ನ್ಯಾಯಾಲಯದಲ್ಲಿ ಹಾಜರಾಗಿದ್ದು ವಿಶೇಷ ಘಟನೆಗೆ ಕಾರಣವಾಯಿತು. ಇದನ್ನು ಗಮನಿಸಿದ ನ್ಯಾಯಾಧೀಶರು, “ನೋಟಿಸ್ ಜಾರಿಗೂ ಮುನ್ನವೇ ನೀವು ಯಾಕೆ ಹಾಜರಾಗಿದ್ದೀರಿ?” ಎಂದು ಪ್ರಶ್ನಿಸಿದರು. ನಂತರ ಬೊಮ್ಮಯ್ಯ ನಾಯಕರ ಪರ ವಕೀಲರು ಮನವಿ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಅಣಕು ಕಾರ್ಯಾಚರಣೆ ಯಶಸ್ವಿ: ಜಿಲ್ಲಾಡಳಿತದಿಂದ ತುರ್ತು ಕ್ರಮಗಳ ಪ್ರದರ್ಶನ

ಅಜೀವ ಸದಸ್ಯರ ಪರ ವಾದ ಮಂಡಿಸಿದ ವಕೀಲ ರಾಘವೇಂದ್ರ ಗಡೆಪ್ಪನವರ ಅವರು, ಕಸಾಪದ ನಿಯಮಾವಳಿ (ಬೈಲಾ) ಪ್ರಕಾರ ಯಾವುದೇ ಸಮ್ಮೇಳನ ನಡೆಸಲು ರಾಜ್ಯ ಘಟಕದ ಅಧ್ಯಕ್ಷರು ಅಥವಾ ಆಡಳಿತಾಧಿಕಾರಿಯ ಸ್ಪಷ್ಟ ಅನುಮತಿ ಕಡ್ಡಾಯ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯವು ತಕ್ಷಣವೇ ಆದೇಶ ಹೊರಡಿಸಿತು. ಜಿಲ್ಲಾ ಕಸಾಪ ಅಧ್ಯಕ್ಷ ಬೊಮ್ಮಯ್ಯ ಎನ್. ನಾಯಕ ಅವರಿಗೆ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಅಳವಡಿಸಲಾದ ಎಲ್ಲಾ ಫ್ಲೆಕ್ಸ್, ಬ್ಯಾನರ್ ಮತ್ತು ಕಟೌಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಆದೇಶ ನೀಡಿದೆ. ಆದೇಶ ಪಾಲಿಸದಿದ್ದರೆ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯವು ಎಚ್ಚರಿಕೆಯನ್ನೂ ನೀಡಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ (ಇಂದು) ಮುಂದೂಡಲಾಗಿದೆ. ಇದರಿಂದಾಗಿ ಬಹುನಿರೀಕ್ಷಿತ 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ನಿಗದಿತ ಸಮಯದಲ್ಲಿ ನಡೆಯುತ್ತದೆಯೇ ಅಥವಾ ರದ್ದಾಗಲಿದೆಯೇ ಎಂಬ ಆತಂಕ ಕನ್ನಡ ಸಾಹಿತ್ಯ ಪರಿಷತ್ ವಲಯದಲ್ಲಿ ಮನೆ ಮಾಡಿದೆ. ಜಿಲ್ಲಾ ಮಟ್ಟದ ಸಾಹಿತ್ಯಾಸಕ್ತರು ಹಾಗೂ ಸ್ಥಳೀಯ ಜನತೆ ಈ ಬೆಳವಣಿಗೆಯನ್ನು ತೀವ್ರ ಕುತೂಹಲದಿಂದ ಗಮನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...