ದಾಂಡೇಲಿ | KSFIC ವಸತಿ ನಿಲಯದ ಕಾರ್ಮಿಕರ ಕುಟುಂಬಗಳನ್ನು ತೆರವುಗೊಳಿಸದಂತೆ ಡಿವೈಎಫ್ಐ ಸಂಘಟನೆ ಆಗ್ರಹ

Date:

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಕೆಎಸ್ಎಫ್ಐಸಿ (KSFIC) ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ 172 ಮನೆಗಳಲ್ಲಿ ವಾಸಿಸುತ್ತಿರುವ ನಿವೃತ್ತ ಹಾಗೂ ಹಾಲಿ ಕಾರ್ಮಿಕರ ಕುಟುಂಬಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು

ಮತ್ತು ಅವರಿಗೆ ಖಾಯಂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಜಿಲ್ಲಾ ಸಮಿತಿಯು ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ. ದೇಶಪಾಂಡೆ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ದಾಂಡೇಲಿ ನಗರಸಭೆ ವ್ಯಾಪ್ತಿಗೆ ಸೇರಿದ ಸುಮಾರು 1850 ಎಕರೆ ಜಮೀನು 1958 ರಿಂದ 1977ರ ಅವಧಿಯಲ್ಲಿ ಅರಣ್ಯ ಇಲಾಖೆಯಿಂದ ನಗರಸಭೆಗೆ ಹಸ್ತಾಂತರವಾಗಿದೆ. ಆದರೆ, ಇದರಲ್ಲಿ ಇಂದಿಗೂ 50 ಎಕರೆ ಜಮೀನು ಅರಣ್ಯ ಇಲಾಖೆಯ ಸುಪರ್ದಿಯಲ್ಲೇ ಉಳಿದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಜಮೀನನ್ನು ತಕ್ಷಣವೇ ನಗರಸಭೆಗೆ ಹಸ್ತಾಂತರಿಸಿದರೆ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ. ಆದ್ದರಿಂದ ಶಾಸಕರು ಈ ವಿಷಯದಲ್ಲಿ ಮುತುವರ್ಜಿ ವಹಿಸಿ ಅರಣ್ಯ ಇಲಾಖೆಯಿಂದ ಜಮೀನು ಬಿಡುಗಡೆಗೊಳಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

1000467810
ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮ್ಸನ್

ಈ ಹಿಂದೆ ಕಟ್ಟಿಗೆ ಉದ್ದಿಮೆಯಾಗಿದ್ದ ಕೆಎಸ್ಎಫ್ಐಸಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ ಅರಣ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ 172 ಮನೆಗಳನ್ನು ನಿರ್ಮಿಸಿ ಬಾಡಿಗೆ ಆಧಾರದ ಮೇಲೆ ನೀಡಲಾಗಿತ್ತು. 1972ರ ನಂತರ ಈ ಪ್ರದೇಶವು ಸಂಪೂರ್ಣವಾಗಿ ನಗರಸಭೆಯ ಸುಪರ್ದಿಗೆ ಬಂದಿರುವುದರಿಂದ, ಈ ಮನೆಗಳ ಉಸ್ತುವಾರಿಯೂ ನಗರಸಭೆಯದ್ದೇ ಆಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಉಪನೋಂದಣಿ ಕಚೇರಿಯಲ್ಲಿ ಕಿತ್ತಾಟ: ಮಹಿಳಾ ಸಿಬ್ಬಂದಿಗೆ ಏಕವಚನದಲ್ಲಿ ನಿಂದಿಸಿದ ಹಿರಿಯ ಅಧಿಕಾರಿ!

ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆ ಹಾಗೂ ಕೆಎಸ್ಎಫ್ಐಸಿ ಅಧಿಕಾರಿಗಳು ಕಾರ್ಮಿಕರಿಗೆ ಮನೆ ಖಾಲಿ ಮಾಡುವಂತೆ ಮೌಖಿಕವಾಗಿ ಸೂಚಿಸುತ್ತಿರುವುದು ಮತ್ತು ಬಾಡಿಗೆ ಸ್ವೀಕರಿಸಲು ನಿರಾಕರಿಸುತ್ತಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಒಂದು ವೇಳೆ ಈ ಕುಟುಂಬಗಳನ್ನು ತೆರವುಗೊಳಿಸಿದರೆ ಅವರು ಬೀದಿಪಾಲಾಗುವ ಭೀತಿ ಎದುರಾಗಿದೆ.

ಕಾರ್ಮಿಕರ ಹಿತರಕ್ಷಣೆ ಮಾಡುವುದು ನಗರಸಭೆಯ ಆದ್ಯ ಕರ್ತವ್ಯವಾಗಿದ್ದು, ಅವರಿಗೆ ಈಗಿರುವ ಮನೆಗಳನ್ನೇ ಖಾಯಂ ವಸತಿಯನ್ನಾಗಿ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯರಾದ ಡಿ. ಸ್ಯಾಮ್ಸನ್ ಅವರು ಪತ್ರದ ಮೂಲಕ ಆರ್ ವಿ ದೇಶಪಾಂಡೆ ಅವರಿಗೆ ಮತ್ತು ದಾಂಡೇಲಿ ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...