ದಾಂಡೇಲಿ | 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಸಿದ್ಧತೆ: ರೋಹಿದಾಸ ನಾಯ್ಕ ಸರ್ವಾಧ್ಯಕ್ಷತೆ

Date:

ದಾಂಡೇಲಿ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಾಂಡೇಲಿ ನಗರ ಸಂಪೂರ್ಣ ಸಜ್ಜಾಗಿದೆ. ಡಿ. 13ರಿಂದ ಡಿ. 15ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಂಭ್ರಮದ ಸಾಹಿತ್ಯ ಜಾತ್ರೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಅಂತಿಮಗೊಳಿಸಲಾಗಿದೆ.

ಹಳೇ ನಗರಸಭೆ ಮೈದಾನದಲ್ಲಿ ವಿಶಾಲವಾದ ಮತ್ತು ಆಕರ್ಷಕವಾದ ಮಂಟಪವನ್ನು ನಿರ್ಮಿಸಲಾಗಿದ್ದು, ನುಡಿ ತೇರು ಎಳೆಯಲು ಸರ್ವ ಸಿದ್ಧತೆಗಳನ್ನು ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳು ಕನ್ನಡ ಧ್ವಜಗಳಿಂದ ಅಲಂಕೃತವಾಗಿ ಕನ್ನಡಮಯ ವಾತಾವರಣ ಸೃಷ್ಟಿಯಾಗಿದೆ.

ಈ ಬಾರಿ ಜಿಲ್ಲೆಯ ಹಿರಿಯ ಸಾಹಿತಿ ಹಾಗೂ ಸಂಘಟಕ ರೋಹಿದಾಸ ನಾಯ್ಕ ಅವರು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ರೋಹಿದಾಸ ನಾಯ್ಕ ಅವರ ಮೆರವಣಿಗೆಯಲ್ಲಿ ನಾಡಿನ 10ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು, ನಾಡಿನ ಹಿರಿಯ ಸಾಹಿತಿಗಳು, ಹಾಗೂ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಸಂದರ್ಭದಲ್ಲಿ ಒಟ್ಟು 25 ಕನ್ನಡ ಸಾಹಿತ್ಯ ಕೃತಿಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಗೌರವ ಸನ್ಮಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಗಣ್ಯರಿಗೆ ‘ರಜತ ಗೌರವ’ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ವಾಸರೆ ಅವರು ಮಾಹಿತಿ ನೀಡಿದ್ದಾರೆ.

ನಾಡು-ನುಡಿ, ಭಾಷೆ ಮತ್ತು ನಾಡಿನ ಸಮಗ್ರ ಅಭಿವೃದ್ಧಿಯ ಕುರಿತು ವಿವಿಧ ವಿಷಯಗಳ ಕುರಿತು ವಿಚಾರಗೋಷ್ಠಿಗಳು ಮತ್ತು ಸಂವಾದಗಳು ನಡೆಯಲಿವೆ. ನಾಲ್ಕು ಪ್ರಾಧಿಕಾರಗಳ ಅಧ್ಯಕ್ಷರು ಸಹ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

1000369413

ಈ ಸುದ್ದಿ ಓದಿದ್ದೀರಾ? ಶಿರಸಿ | ನಾಲ್ಕೇ ದಿನಗಳಲ್ಲಿ ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹ 9.95 ಲಕ್ಷ ಮೌಲ್ಯದ ಸೊತ್ತು ವಶ

ಸಮ್ಮೇಳನಾಧ್ಯಕ್ಷರಾದ ರೋಹಿದಾಸ ನಾಯ್ಕ ಅವರು ಆಡಳಿತ, ಸಂಘಟನೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರು. ಅವರು ಅಬಕಾರಿ ಇಲಾಖೆಯಲ್ಲಿ ಹಿರಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿ 2002ರಲ್ಲಿ ನಿವೃತ್ತರಾಗಿದ್ದಾರೆ. ‘ಮಾಸ್ತಾ ಹಾಗೂ ಇತರ ಕಥೆಗಳು’, ‘ಕರೆಯದೆ ಬರುವವರು’, ‘ಕತ್ತಲೆ ದಾರಿ ದೂರ’ ಅವರ ಪ್ರಮುಖ ಕಥಾ ಸಂಕಲನಗಳು. ಇವರ ಪ್ರೇಮದ ಕನಸುಗಳು- ಕವನ ಸಂಕಲನ, ನೀರ ನೆರಳು- ಕಾದಂಬರಿ ಸೇರಿ ಅನೇಕ ವೈಚಾರಿಕ ಕೃತಿಗಳನ್ನು ರಚಿಸಿದ್ದಾರೆ. 2004ರಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರು ಬಾರಿ ಸೇವೆ ಸಲ್ಲಿಸಿದ್ದಾರೆ. ಅವರ ‘ಸುರಂಗ ಚಕ್ರ’ ಕಥೆ ಚಲನಚಿತ್ರವಾಗಿದೆ.

ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ತಹಶೀಲ್ದಾರ್ ಶೈಲೇಶ ಪರಮಾನಂದ ಅವರು, “ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...