ದಾಂಡೇಲಿ | ಪಿಎಂಎವೈ ಮನೆಗಳ ಕಾಮಗಾರಿ ನಿಧಾನ; ಸತ್ಯಾಗ್ರಹ ಆರಂಭಿಸಿದ ಫಲಾನುಭವಿಗಳು

Date:

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯಡಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಕಳೆದ ಎಂಟು ವರ್ಷಗಳಿಂದ ದಾಂಡೇಲಿಯ ಅಂಬೇವಾಡಿಯಲ್ಲಿ ಒಟ್ಟು 1106 ಜಿ+2 ಮನೆಗಳ ನಿರ್ಮಾಣ ಕಾರ್ಯ ಕೈಗೊಂಡಿದೆ. ಈ ಕೆಲಸವನ್ನು 12 ತಿಂಗಳಲ್ಲಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಇಂದಿನವರೆಗೆ ಕೇವಲ 100 ಮನೆಗಳನ್ನು ಮಾತ್ರ ಫಲಾನುಭವಿಗಳಿಗೆ ವಿತರಿಸಲಾಗಿದೆ. ಇನ್ನು 84 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದರೂ ವಿತರಣೆಯಾಗದೆ ಉಳಿದಿವೆ. ಉಳಿದ 914 ಮನೆಗಳ ನಿರ್ಮಾಣ ಪ್ರಕ್ರಿಯೆ ನಿಧಾನಗೊಂಡಿದ್ದು, ಕೆಲಸ ತ್ವರಿತಗೊಳಿಸಲು ಹಾಗೂ ಮನೆಗಳನ್ನು ಶೀಘ್ರ ವಿತರಿಸಲು ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಂ ಖಾನ್ ನೇತೃತ್ವದಲ್ಲಿ ಫಲಾನುಭವಿಗಳು ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಎದುರು ಧರಣಿ–ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

ಗೃಹ ಮಂಡಳಿ ಮನೆ ನೀಡುವ ಭರವಸೆಯೊಂದಿಗೆ ಫಲಾನುಭವಿಗಳಿಂದ ₹50,000 ರಿಂದ ₹70,000ರವರೆಗೆ ಮೊತ್ತವನ್ನು ಸಂಗ್ರಹಿಸಿತ್ತು. ಆದರೆ ಎಂಟು ವರ್ಷಗಳಾದರೂ ಮನೆ ಹಸ್ತಾಂತರವಾಗಿಲ್ಲ. ಒಟ್ಟು ₹53 ಕೋಟಿ ವೆಚ್ಚದ ಯೋಜನೆಯ ಪೈಕಿ ಸುಮಾರು ₹38 ಕೋಟಿ ಹಣ ಗುತ್ತಿಗೆದಾರರಿಗೆ ಪಾವತಿಯಾಗಿರುವುದಾಗಿ ತಿಳಿದುಬಂದಿದೆ. ಯೋಜನೆಯ ಬಾಕಿ ಕಾಮಗಾರಿಗೆ ಇದೀಗ ಹಣದ ಕೊರತೆ ಉಂಟಾಗಿದ್ದು, ಗುತ್ತಿಗೆದಾರರು ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರದಲ್ಲೇ ಸ್ಥಾಪನೆ: ಸಚಿವ ಮಂಕಾಳ ವೈದ್ಯ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಾನುಭವಿಗಳು ಸಾಲ ಪಡೆದು ಮನೆಗಾಗಿ ಹಣ ಪಾವತಿಸಿದರೂ ಮನೆ ಸಿಗದೆ ವಂಚನೆಗೊಳಗಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಶಾಸಕರು, ನಗರಸಭೆ ಹಾಗೂ ಗೃಹ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಇತ್ಯರ್ಥಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...