ಬಳ್ಳಾರಿ ಜೈಲಿನಲ್ಲಿ ಶೌಚಕ್ಕೆ ಸರ್ಜಿಕಲ್ ಚೇರ್ ಕೇಳಿದ ನಟ ದರ್ಶನ್

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್‌ರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಇಲ್ಲಿ ದರ್ಶನ್ ಈಗ ಶೌಚಕ್ಕಾಗಿ ಸರ್ಜಿಕಲ್ ಚೇರ್ ಕೇಳಿದ್ದಾರೆ ಎಂದು ವರದಿಯಾಗಿದೆ.

ನಟ ದರ್ಶನ್ ಅವರಿಗೆ ಬೆನ್ನು ನೋವು ಜೋರಾಗಿದ್ದು, ಇದರಿಂದಾಗಿ ಶೌಚಾಕ್ಕಾಗಿ ಸರ್ಜಿಕಲ್ ಚೇರ್ ಅನ್ನು ಕೇಳಿರುವುದಾಗಿ ಕಾರಾಗೃಹ ಇಲಾಖೆಯ ಉತ್ತರ ವಲಯ ಉಪಮಹಾನೀರೀಕ್ಷಿಕ ಟಿ.ಪಿ ಶೇಷ ತಿಳಿಸಿದ್ದಾರೆ.

ಇಲಾಖೆಯ ಸೂಚನೆಯಂತೆ ಬಳ್ಳಾರಿ ಜೈಲಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಉಪಮಹಾನೀರೀಕ್ಷಿಕರು ದರ್ಶನ್ ಜೈಲಿನಲ್ಲಿ ಆಹಾರ ಸೇವನೆ ಮಾಡದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ

“ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಇದ್ದು, ಬೆನ್ನೆಲುಬು ಸಮಸ್ಯೆ ಇರುವ ಕಾರಣ ಶೌಚಾಕ್ಕೆ ಕಷ್ಟವಾಗುತ್ತಿದೆ ಎಂದು ದರ್ಶನ್ ತಿಳಿಸಿದ್ದಾರೆ. ವೆಸ್ಟರ್ನ್ ಕಮೋಡ್ ವ್ಯವಸ್ಥೆ ಮಾಡಿ ಅಥವಾ ಸರ್ಜಿಕಲ್ ಚೇರ್ ಆದರೂ ನೀಡಿ ಎಂದು ದರ್ಶನ್ ಮನವಿ ಮಾಡಿದ್ದಾರೆ. ದರ್ಶನ್ ಟಿವಿ ಕೇಳಿದರೆ ನೀಡಲಾಗುತ್ತದೆ. ಇತರೆ ಕೈದಿಗಳಿಗೂ ಈ ವ್ಯವಸ್ಥೆಯಿದೆ” ಎಂದು ಶೇಷ ಹೇಳಿದರು.

“ದರ್ಶನ್ ಅವರನ್ನು ಜೈಲಿನಲ್ಲಿ ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ನಿರ್ದೇಶನ ನೀಡಲಾಗಿದೆ. ಅವುಗಳ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಟುಂಬಸ್ಥರು ಮತ್ತು ವಕೀಲರನ್ನು ಬಿಟ್ಟು ಬೇರೆ ಯಾರಿಗೂ ದರ್ಶನ್ ಭೇಟಿಗೆ ಅವಕಾಶವಿಲ್ಲ. ರಾಜಕೀಯ ಒತ್ತಡಗಳಿಗೆ ನಾವು ಯಾವುದೇ ಕಾರಣಕ್ಕೂ ಮಣಿಯಲ್ಲ” ಎಂದು ದರ್ಶನ್ ಸ್ಪಷ್ಟಪಡಿಸಿದರು.

ಸದ್ಯ ಬಳ್ಳಾರಿ ಜೈಲಿನಲ್ಲಿ ಯಾವುದೇ ಮೊಬೈಲ್ ಜಾಮರ್‌ಗಳಿಲ್ಲ. ಆಧುನಿಕ ಜಾಮರ್ ಅಳವಡಿಸಲು ಕ್ರಮತೆಗೆದುಕೊಳ್ಳಲಾಗಿದೆ ಎಂದೂ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...