ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

Date:

ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ.

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ 11 ಮತ್ತು 12ರಂದು ಜಗಳೂರಿನಲ್ಲಿ ಆಯೋಜಿಸಿಲಾಗಿದೆ. ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಎ ಬಿ ರಾಮಚಂದ್ರಪ್ಪನವರು ಸಾಮಾಜಿಕ ಪರಿವರ್ತನೆಯ ಹೋರಾಟಗಾರರಾಗಿದ್ದು, ನಾವು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರೂ ಆಗಿದ್ದಾರೆ. ಮೂರು ದಶಕಗಳಿಗೂ ಹೆಚ್ಚಿನ ಕಾಲ ಪದವಿ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. 19 ಕೃತಿಗಳನ್ನು ರಚಿಸಿರುವ ಅವರು “ಸ್ವಾತಂತ್ರ್ಯೋತ್ತರ ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆಗಳು” ವಿಷಯದಲ್ಲಿ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಗಳಿಸಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ಮಾತನಾಡಿ, “ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನದ ಕುರಿತಾಗಿ ಕೂಲಂಕುಷವಾಗಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಹೆಚ್ಚಿನ ಕಾರ್ಯಕಾರಿ ಸಮಿತಿ ಸದಸ್ಯರು ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಒಲವು ತೋರಿದ್ದು, ಅವರ ಆಯ್ಕೆ ಸುಗಮವಾಗಿದೆ. ಜಗಳೂರಿನ ಶಾಸಕ ಬಿ ದೇವೇಂದ್ರಪ್ಪ ಅವರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಎಲ್ಲರ ಸಹಕಾರದಿಂದ ಜನವರಿ 11 ಮತ್ತು 12 ರಂದು ಅರ್ಥಪೂರ್ಣವಾಗಿ ಸಮ್ಮೇಳನ ನಡೆಸೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪಡಿತರ ತಿದ್ದುಪಡಿ ವಿರೋಧಿಸಿ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ

ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಬಿ ದಿಳ್ಯಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ ಜಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ದಾವಣಗೆರೆ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಜಗಳೂರು ತಾಲೂಕು ಅಧ್ಯಕ್ಷೆ ಕೆ ಸುಜಾತಮ್ಮ, ಹರಿಹರ ತಾಲೂಕು ಅಧ್ಯಕ್ಷ ಡಿ ಎಂ ಮಂಜುನಾಥಯ್ಯ, ಚನ್ನಗಿರಿ ತಾಲೂಕು ಅಧ್ಯಕ್ಷ ಎಲ್‌ ಜಿ ಮಧುಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಜಿ ಮುರಿಗೆಪ್ಪಗೌಡ, ನ್ಯಾಮತಿ ತಾಲೂಕು ಅಧ್ಯಕ್ಷ ಡಿ ಎಂ ಹಾಲಾರಾಧ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್ ಒಡೇನಪುರ, ಕಾರ್ಯಕಾರಿ ಸಮಿತಿ ಸದಸ್ಯ‌ರಾದ ಸೋಮೇಶ್ವರ ಕೆ ಎಂ ಸುರೇಶ್, ಪ್ರಸಾದ್ ಬಂಗೇರ, ಎಸ್ ಎಂ ಮಲ್ಲಮ್ಮ, ಬಿ ಎಂ ಭೈರವೇಶ್ವರ, ಸಿ ಕೆ ರುದ್ರಾಕ್ಷಿ ಬಾಯಿ, ಹೆಚ್ ಕೆ ಸತ್ಯಭಾಮ ಮಂಜುನಾಥ್, ಎ ರಿಯಾಜ್ ಅಹಮದ್, ಎಂ ಎ ಸುದರ್ಶನ್, ಕೆ ಪಿ‌ ಮರಿಯಾಚಾರ್ ಹಾಗೂ ಇತರ ಸದಸ್ಯರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...