ದಾವಣಗೆರೆ | ಬೋರ್‌ವೆಲ್‌ ಕೊರೆಯಲು ಬಂದಿದ್ದ ಲಾರಿ ಬೆಂಕಿಗಾಹುತಿ

Date:

ಬೋರ್‌ವೆಲ್‌ ಕೊರೆಯಲು ಬಂದಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ನಡೆದಿದೆ.

ಮಳೆಯ ಅವಕೃಪೆಯಿಂದಾಗಿ ಬೆಳೆ, ತೋಟಗಳನ್ನು ಉಳಿಸಿಕೊಳ್ಳಲು ಅನ್ನದಾತ ಅಂತರ್ಜಲಕ್ಕಾಗಿ ಬೋರ್‌ವೆಲ್ ಮೊರೆ ಹೋಗಿದ್ದು, ಹತ್ತಾರು ಬೋರ್‌ವೆಲ್ ಗಾಡಿಗಳ ಸದ್ದು ಹಳ್ಳಿಗಳಲ್ಲಿ ಕೇಳಿಬರುತ್ತಿದೆ. ಆದರೆ ಕೊಳವೆಬಾವಿ ಕೊರೆಯಲು ಬಂದ ಗಾಡಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ಲಾರಿಯು ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಯತ್ನಿಸಲಾಯಿತಾದರೂ ಅಗ್ನಿಶಾಮಕ ದಳ ವಾಹನ ಬರುವ ವೇಳೆಗಾಗಲೇ ಸಂಪೂರ್ಣವಾಗಿ ಬೆಂಕಿಯಿಂದ ಸುಟ್ಟು ಕರಕಲಾಯಿತು.

ಈ ಸುದ್ದಿ ಓದಿದ್ದೀರಾ? ಉಡುಪಿ | ಗ್ಯಾರೇಜ್ ಕಾರ್ಮಿಕರ ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಶಾಸಕ ಯಶಪಾಲ್ ಸುವರ್ಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಕ್ಕುವಾಡ ಗ್ರಾಮದಲ್ಲಿ ಧರ್ಮರಾಯ ಎನ್ನುವವರ ಜಮೀನಿನಲ್ಲಿ ನೀರಿಗಾಗಿ ಬೋರ್‌ವೆಲ್ ಕೊರೆಸಲು ಉದ್ದೇಶಿಸಲಾಗಿತ್ತು. ಲಾರಿಯೂ ಬಂದಿತ್ತು. ಜತೆಗೆ ಸಹಾಯಕ್ಕೆ ಎಂದು ಮತ್ತೊಂದು ಲಾರಿ ಬಂದಿತ್ತು. ಈ ವೇಳೆ ಬೋರ್‌ವೆಲ್ ಕೊರೆಸಲು ಸಹಾಯಕ್ಕೆ ಬಂದಿದ್ದ ಲಾರಿ ಹೊತ್ತಿ ಉರಿದಿದೆ. ಧರ್ಮರಾಯ ಎಂಬುವವರ ಜಮೀನಿನಲ್ಲಿ ಲಾರಿ ಸುಟ್ಟು ಕರಕಲಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...