ದಾವಣಗೆರೆ | ಚಾರ್ಜ್‌ಶೀಟ್‌ನಿಂದ ಹೆಸರು ಕೈಬಿಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ

Date:

ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲು ಲಂಚ ಸ್ವೀಕರಿಸುವಾಗ ಎಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನೆಡೆದಿದೆ.

ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ₹50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿಗೆ ಒಳಗಾದ ಪೊಲೀಸ್ ಅಧಿಕಾರಿಯಾಗಿದ್ದಾರೆ.

ಲೋಕಾಯುಕ್ತ ದೂರುದಾರ ಮಣಿಕಂಠ ಆಚಾರ್ಯ ಮತ್ತು ಅವರ ತಾಯಿ ಭಾಗಮ್ಮ ಆಚಾರ್ಯ ಮತ್ತು ಪತ್ನಿ ಅರ್ಚನ ಆಚಾರ್ಯ ಅವರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್ ಶೀಟ್‌ನಿಂದ ಕೈಬಿಡಲು ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ 1,00,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಡವಾಗಿ ₹50,000 ನೀಡಲು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ ಹಣ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದ ದೂರುದಾರ ಈ ಬಗ್ಗೆ ದಾವಣಗೆರೆ ಲೋಕಾಯುಕ್ತ ಕಚೇರಿಗೆ ಗಣಕೀಕೃತ ದೂರು ದಾಖಲಿಸಿದ್ದರು.

ಆರೋಪಿತ ಎಎಸ್ಐ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ದೂರಿನ ಬಗ್ಗೆ ಮೊಕದ್ದಮೆ ಪಿಸಿ ಆಕ್ಟ್-1988(ತಿದ್ದುಪಡಿ ಕಾಯ್ದೆ-2018) ರೀತ್ಯ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಕ್ರಮ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ದೂರುದಾರರಿಂದ ಆರೋಪಿತರು ₹50,000 ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ ಎಸ್ ಕೌಲಾಪೂರೆ ಮಾರ್ಗದರ್ಶನದಲ್ಲಿ, ಉಪಾಧೀಕ್ಷಕಿ ಕಲಾವತಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಮಧುಸೂದನ್ ಸಿ ಪ್ರಭು ಬಸೂರು, ಸರಳ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಜ್ಞಾನಕ್ಕೆ ಅಂತ್ಯವಿದೆ, ಜ್ಞಾನವೆಂಬುದು ಅಮರ: ಬಸವ ಹರಳಯ್ಯ ಶ್ರೀ

“ಕಾರ್ಯಾಚರಣೆಯಲ್ಲಿ ₹50,000 ನಗದು ಮತ್ತು ಎಎಸ್ಐ ಈರಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...