ದಾವಣಗೆರೆ | ಅತ್ಯಾಚಾರ ಪ್ರಕರಣದ ಆರೋಪಿ; ಜೈಲು ಗೋಡೆ ಹಾರಿ ಪರಾರಿ

Date:

ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ ನಡೆದಿದೆ. ಪರಾರಿಯಾದ ಆರೋಪಿ ವಸಂತ್(23) ಎಂದು ಗುರುತಿಸಲಾಗಿದ್ದು, ಈತ ಕಾರಾಗೃಹದ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ.

ಆರೋಪಿ ವಸಂತ್ ದಾವಣಗೆರೆ ನಗರದ ಹೊರವಲಯದ ಕೂರರ್ ಪ್ರದೇಶದ ನಿವಾಸಿಯಾಗಿದ್ದಾನೆ. ಈತ ಆಟೋ ಚಾಲಕನಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಈತನ ವಿರುದ್ಧ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೋರಾ? ಬೀದರ್‌ | ಕಳವು ಪ್ರಕರಣ: 9 ಆರೋಪಿಗಳ ಬಂಧನ; 28 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವಸಂತ್‌ನನ್ನು ಮಹಿಳಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ದಾವಣಗೆರೆ ಉಪ ಕಾರಾಗೃಹದಲ್ಲಿದ್ದ ಆರೋಪಿ ಶನಿವಾರ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ. ಈ ವೇಳೆ, ಆತನ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೆ ತಪ್ಪಿಸಿಕೊಂಡಿದ್ದಾನೆ.

ಆರೋಪಿ ಪರಾರಿಯಾದ ಕೆಲವು ಗಂಟೆಗಳ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಜೈಲು ಸಿಬ್ಬಂದಿ ಬಸವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪರಾರಿಯಾಗಿರುವ ಅತ್ಯಾಚಾರ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...