ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ; ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ ವ್ಯಕ್ತಪಡಿಸಿದ್ದು, ಅಹಿಂದ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಹೋರಾಟ ನಡೆಸಿದರು.‌ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಧಿಕ್ಕಾರದ ಘೋಷಣೆ ಕೂಗಿ ಗಾಂಧಿ ವೃತ್ತ, ಹಳೇ ಪಿಬಿ ರಸ್ತೆಯಲ್ಲಿ ರಸ್ತೆತಡೆ ನಡೆಸಿದ ಕಾರ್ಯಕರ್ತರು, ʼಇದು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ಷಡ್ಯಂತ್ರʼ ಎಂದು ಆರೋಪಿಸಿದರು.

ಅಹಿಂದ ಹೋರಾಟ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಆತ್ಮಹತ್ಯೆ ಯತ್ನ ನೆಡೆಸಿದರು. ಮುಂಜಾಗರೂಕತೆಯಿಂದ ಮಧ್ಯೆ ಪ್ರವೇಶಿಸಿದ ಪೋಲೀಸರು ಪೆಟ್ರೋಲ್ ತುಂಬಿದ ಬಾಟಲ್‌ಗಳನ್ನು ಕಾರ್ಯಕರ್ತರ ಕೈಯಿಂದ ಕಿತ್ತುಕೊಂಡು ಆತ್ಮಹತ್ಯೆ ಯತ್ನ ವಿಫಲಗೊಳಿಸಿದರು. ಪೆಟ್ರೋಲ್ ಬಾಟಲ್ ಕಿತ್ತುಕೊಳ್ಳುವ ಪ್ರಯತ್ನದಲ್ಲಿ ಕೆಲವು ಪೊಲೀಸ್ ಸಿಬ್ಬಂದಿ, ಮಹಿಳಾ ಪೊಲೀಸರ ಮೇಲೆ ಹಾಗೂ ಕಾರ್ಯಕರ್ತರ ಮೇಲೂ ಪೆಟ್ರೋಲ್ ಚೆಲ್ಲಾಡಿ ಮೈಮೇಲೆ ಬಿದ್ದಿದ್ದು ಅದೃಷ್ಟವಶಾತ್ ಪೊಲೀಸರ ಸಮಯಪ್ರಜ್ಞೆಯಿಂದ ಯಾವುದೇ ಅವಘಡ ಸಂಭವಿಸಿಲ್ಲ. ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಖಂಡನೆ 2

ಕುರುಬ ಸಮಾಜದ ಮುಖಂಡ ಎಚ್ ಬಿ ಮಂಜಪ್ಪ ಮಾತನಾಡಿ, “ಯಾವುದೇ ಭ್ರಷ್ಟಾಚಾರ ಹಿನ್ನೆಲೆ ಇಲ್ಲದ ಎಲ್ಲ ವರ್ಗದ ಸಾಮಾಜಿಕ ನ್ಯಾಯದ ನೇತಾರ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರ ಹಿಂದೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳ ಕೈವಾಡವಿದೆ. ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಜನಾದೇಶ ಪಡೆದು ಅಧಿಕಾರಕ್ಕೆ ಬಂದ ಬಡವರು, ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿವೆ. ಇದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಕಿಡಿ

ಪ್ರತಿಭಟನೆಯಲ್ಲಿ ಚಮನ್ ಸಾಬ್, ಬಿ ವೀರಣ್ಣ, ಪಾಲಿಕೆ ಸದಸ್ಯ ನಾಗರಾಜ್ ಎ, ಲಿಂಗರಾಜ್, ಪುಟ್ಬಾಲ್ ಗಿರೀಶ್, ಕತ್ತಲಗೆರೆ ತಿಪ್ಪಣ್ಣ, ಅಯೂಬ್ ಪೈಲ್ವಾನ್, ಹೊದಿಗೆರೆ ರಮೇಶ್, ಎಸ್ ಮಲ್ಲಿಕಾರ್ಜುನ್, ಗೋಣೆಪ್ಪ, ಬಿ ಬಿ ಮಲ್ಲೇಶ್, ಪರಶುರಾಮಪ್ಪ ಮತ್ತು ಅಹಿಂದ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...