ದಾವಣಗೆರೆ | ಮಾ.9 ರಂದು ‘ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ’ ಸಮಾವೇಶ

Date:

ಬೆಂಗಳೂರಿನ ಬಹುಜನ ಸಮಾಜ ಪಾರ್ಟಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ‘ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ’ ಬೆಂಗಳೂರು ವಿಭಾಗ ಮಟ್ಟದ ಸಮಾವೇಶವನ್ನು ಮಾರ್ಚ್ 9 ರಂದು ದೇವನಹಳ್ಳಿ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್‌ಟಿ ರಾಜ್ಯ ಕಾರ್ಯದರ್ಶಿ ಎಚ್ ಮಲ್ಲೇಶ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದೆಲ್ಲೆಡೆ ಇಂದು ಹೆಚ್ಚು ಚರ್ಚೆಗೊಳಗಾಗುತ್ತಿರುವ ವಿಷಯ ಸಂವಿಧಾನ. ಬಿಜೆಪಿ ತನ್ನ ಸರ್ಕಾರ ರಚಿಸುವಾಗಲೆಲ್ಲಾ ಸಂವಿಧಾನ ಬದಲಾಯಿಸುವುದಾಗಿ ಹೇಳುತ್ತಲೇ ಬಂದಿದೆ. ಇಂತಹ ಪ್ರಯತ್ನಕ್ಕೆ ಹಿಂದೆ ಎನ್‌ಡಿಎ ಸರ್ಕಾರ ಕೈ ಹಾಕಿದಾಗ ಕಾನ್ಶಿರಾಮ್ ಅವರ ಹೋರಾಟಕ್ಕೆ ಹೆದರಿ ಸುಮ್ಮನಾದರು” ಎಂದು ನೆನಪಿಸಿದರು.

“ಈ ಸಮಾವೇಶದ ಮೂಲಕ ಬಿಜೆಪಿ ಸಂವಿಧಾನ ವಿರೋಧಿ ಕೆಲಸಗಳ ಪಟ್ಟಿಯನ್ನು ಮಾಡಿ, ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಸಮಾವೇಶದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆ‌ರ್ ಮುನಿಯಪ್ಪ, ಉಪಾಧ್ಯಕ್ಷ ಡಿ ಎಸ್ ಗಂಗಾಧರ್, ಬಹುಜನ ರಾಜ್ಯ ಕಾರ್ಯದರ್ಶಿ ಎಚ್ ಮಲ್ಲೇಶ್ ಹಾಗೂ ರಾಜ್ಯ ಸಮಿತಿ ಪದಾಧಿಕಾರಿಗಳು ಸಮಾವೇಶಕ್ಕೂ ಮುನ್ನ ಟಿಪ್ಪು ಸುಲ್ತಾನ್ ಪಾರ್ಕ್‌ನಿಂದ ಮೆರವಣಿಗೆ ಹೊರಟು ಸಮಾವೇಶದ ಸ್ಥಳವನ್ನು ತಲುಪಲಿದೆ. ದಾವಣಗೆರೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶಕ್ಕೆ ತೆರಳಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಂತರ್ಜಲ ಮಟ್ಟ ಕುಸಿತ; ಬರದ ನಡುವೆ ಜಲಕ್ಷಾಮದ ಭೀತಿ

“ದಾವಣಗೆರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಪಕ್ಷದಿಂದ ನಾಲ್ವರು ಆಕಾಂಕ್ಷಿಗಳಿದ್ದು, ಮಾರ್ಚ್ 12ರಂದು ನಡೆಯುವ ರಾಜ್ಯ ಸಮಿತಿಯಲ್ಲಿ ಅಂತಿಮವಾಗಿ ಅಭ್ಯರ್ಥಿಗಳ ನಿರ್ಧಾರ ಮಾಡಲಾಗುವುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾವುಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಡಿ ಹನುಮಂತಪ್ಪ, ಯಶೋಧ ಪ್ರಕಾಶ್, ಜೆ ಡಿ ಕೃಷ್ಣಮೂರ್ತಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...