ದಾವಣಗೆರೆ | ಭೀಮಾ ಕೋರೆಗಾಂವ್‌ ವಿಜಯೋತ್ಸವ ಆಚರಣೆ

Date:

ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಐತಿಹಾಸಿಕ ಘಟನೆಯಾಗಿದ್ದು, 30 ಸಾವಿರದಷ್ಟು ಸೈನಿಕರಿದ್ದ ಪೇಶ್ವೆಗಳನ್ನು 500 ಮಂದಿಯಿದ್ದ ಮಹರ್ ಸೈನಿಕರು ಹೋರಾಟ ನಡೆಸಿ ಸೋಲಿಸಿದ ಮಹತ್ವದ ದಿನವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಮಲ್ಲೇಶ್ ಅಭಿಮತ ವ್ಯಕ್ತಪಡಿಸಿದರು.

ದಾವಣಗೆರೆ ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಭೀಮಾ ಕೋರೆಗಾಂವ್ ವಿಜಯೋತ್ಸವʼ ಆಚರಿಸಿ ಮಾತನಾಡಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಭೀಮಾ ಕೋರೆಗಾಂವ್ ವಿಜಯೋತ್ಸವ ಬಗ್ಗೆ ತಿಳಿದು ಸಂಶೋಧನೆ ನಡೆಸಿ ಇತಿಹಾಸದ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಈ ದಿನದಂದು ಹಲವಾರು ಜನ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸುತ್ತಾರೆ. ಮರಾಠ ಪೇಶ್ವೆಗಳನ್ನು ಸೋಲಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಮಹರ್ ಸೈನಿಕರ ಸಹಾಯ ಪಡೆದು ಪೇಶ್ವೆಗಳನ್ನು ಸೋಲಿಸಿ ಬ್ರಿಟಿಷ್ ಆಡಳಿತಕ್ಕೆ ಇದು ಮುನ್ನುಡಿ ಪಡೆಯಿತು. ದಲಿತರನ್ನು ಅವಮಾನಿಸಿದ್ದ ಪೇಶ್ವೆಗಳ ವಿರುದ್ಧ ದಲಿತರು ಆತ್ಮಗೌರವ, ಹಕ್ಕುಗಳಿಗಾಗಿ ಹೋರಾಡಿದ ಐತಿಹಾಸಿಕ ದಿನವೇ ಭೀಮಾ ಕೋರೆಗಾಂವ್‌ ವಿಜಯೋತ್ಸವ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮಕ್ಕೂ ಮುನ್ನ ಹಲವಾರು ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗವಹಿಸಿ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಂಬೇಡ್ಕರ್‌ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ

ಈ ಸಂಭ್ರಮಾಚರಣೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಹೆಗ್ಗೆರೆ ರಂಗಪ್ಪ, ಅವರಗೆರೆ ಹೆಚ್ ಜಿ ಉಮೇಶ್, ಜಿಗಳಿ ಹಾಲೇಶ್, ಪುರದಾಳ್ ಪರಮೇಶ್, ಎಲ್ ಜಯಣ್ಣ, ಬಾತಿ ಸಿದ್ದೇಶ್, ಶಶಿಧರ್ ಶಿರಮಗೊಂಡನಹಳ್ಳಿ, ಮಲ್ಲೇಶ್ ಚಿಕ್ಕನಹಳ್ಳಿ, ಐರಣಿ ಚಂದ್ರು, ನಿಟ್ಟುವಳ್ಳಿ ಉಮೇಶ್, ನಿಂಗರಾಜ್ ಶಿರಮಗೊಂಡನಹಳ್ಳಿ, ನಾಗರಾಜ್ ಚಿಕ್ಕನಹಳ್ಳಿ, ರಾಮನಗರ ನಿಂಗಪ್ಪ, ತಿಪ್ಪೇರುದ್ರಪ್ಪ, ನಾಗೇಶ್‌, ಮೇಗಳಗೆರೆ ಮಂಜು, ಹೆಚ್ ಸಿ ಮಲ್ಲಪ್ಪ, ಬಿ ಹನುಮಂತಪ್ಪ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...