ದಾವಣಗೆರೆ | ಸಮರ್ಪಕ ವಿದ್ಯುತ್ ಪೂರೈಕೆಗೆ ಬಿಜೆಪಿ ಆಗ್ರಹ

Date:

ರಾಜ್ಯದಲ್ಲಿ ಕೃಷಿಗೆ ಮತ್ತು ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಸ್ಕಾಂನ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಶಾಸಕ ಬಿ.ಪಿ ಹರೀಶ್ ಮಾತನಾಡಿ, “ಸರ್ಕಾರ ರಾಜ್ಯವನ್ನು ಕತ್ತಲೆ ಕೂಪಕ್ಕೆ ತಳ್ಳಿದೆ. ರೈತರಿಗೆ ಅನ್ಯಾಯ ಅಗುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿದ್ಯುತ್ ಇಲ್ಲದೆ ರಾಜ್ಯದ ರೈತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಗ್ಯಾರಂಟಿ ಸಮರ್ಪಕವಾಗಿ ರಾಜ್ಯದ ಮಹಿಳೆಯರಿಗೆ ತಲುಪಿಲ್ಲ. ಅನ್ಯಾಯ ಮಾಡಿದ ಸರ್ಕಾರವನ್ನು ಕಿತ್ತೊಗೆಯುವ ತನಕ ವಿಶ್ರಮಿಸಬಾರದು” ಎಂದರು.

ವಿಧಾನ ಪರಿಷತ್‌ ಸದಸ್ಯ ಎನ್ ರವಿಕುಮಾ‌ರ್ ಮಾತನಾಡಿ, “ಒಬ್ಬ ಕಳ್ಳ, ಒಬ್ಬ ಮಳ್ಳರ ಸರ್ಕಾರ ಕಮಿಷನ್ ದಂಧೆ ಮಾಡುತ್ತಿದೆ. ರಾಜ್ಯದ ಜನರಿಗೆ ನಿರಂತರ ವಿದ್ಯುತ್ ಕೊಡದೆ ಕತ್ತಲೆ ಭಾಗ್ಯ ತಂದಿದೆ.
ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಮಾತ್ರ 24ತಾಸು ವಿದ್ಯುತ್ ಸಿಗುತ್ತದೆ”‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಿಂದ ಸಂಗ್ರಹ ಆದ ಹಣವನ್ನು ಪಂಚ ರಾಜ್ಯಗಳ ಚುನಾವಣೆಗೆ ಪೆಂಡಿಂಗ್ ಮಾಡಲಾಗುತ್ತಿದೆ. ಇತ್ತ ರಾಜ್ಯದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಮೂಲಕ ರಾಜ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ಯಾರಂಟಿ ಯೋಜನೆ 1.28ಕೋಟಿ ಮಹಿಳೆಯರಿಗೆ ಬರಬೇಕಾದ ಹಣ ಕೇವಲ 50 ಲಕ್ಷ ಮಂದಿ ಮಹಿಳೆಯರಿಗೆ ನೀಡಲಾಗುತ್ತಿದೆ. ಅದೇ ರೀತಿ ಅನ್ನಭಾಗ್ಯ ಯೋಜನೆಯಲ್ಲಿಯೂ ಸರಿಯಾದ ರೀತಿಯಲ್ಲಿ ಅಕ್ಕಿ ಕೊಡುತ್ತಿಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳೂ ವಿಫಲವಾಗಿವೆ. ಎಲ್ಲ ಹಣವನ್ನು ಲೂಟಿ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

“ಎಲ್ಲ ಯೋಜನೆಗಳ ಹಣವನ್ನು ಲೂಟಿ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರದ ದಂಧೆಯ ಹಣ ಅಂಬಿಕಾಪತಿ ಮನೆಯಲ್ಲಿ ಸಿಕ್ಕಿದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೇಶ್‌ ಹನಗವಾಡಿ, ಮಾಜಿ ಸಚಿವ ಎಸ್‌ ಎ ರವಿಂದ್ರನಾಥ, ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಡಾ. ಎ ಹೆಚ್‌ ಶಿವಯೋಗಿಸ್ವಾಮಿ, ಮುಖಂಡರುಗಳಾದ ಶ್ರೀನಿವಾಸ, ದಾಸಕರಿಯಪ್ಪ, ಬಿ ಜೆ ಅಜಯ್ ಕುಮಾರ್, ಎಸ್ ವೀರೇಶ್, ಲೋಕಿಕೆರೆ ನಾಗರಾಜ್‌, ಬಿ ಎಂ ಸತೀಶ್‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...