ದಾವಣಗೆರೆ | ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಆರೋಪಿಸಿ ಮೌನ‌ ಪ್ರತಿಭಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಉಪ ವಿಭಾಗಾಧಿಕಾರಿ ಕಚೇರಿ ಬಳಿ ಮೌನ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ನ್ಯಾಯಾಲಯ ಒಳ್ಳೆಯ ತೀರ್ಪು ನೀಡುವ ವಿಶ್ವಾಸವಿತ್ತು. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕವಾಗಿ ಎರಡನೇ ಬಾರಿಗೆ ಒಳ್ಳೆಯ ಅಧಿಕಾರ ನೀಡುತ್ತಿದ್ದಾರೆ. ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರು ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ ಅವರು, ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ
ಮುಂದುವರಿಯಬೇಕು. ಅವರ ಪರ ಇಡೀ
ರಾಜ್ಯದ ಜನರಿದ್ದಾರೆ. 136 ಶಾಸಕರಿದ್ದಾರೆ.
ಕಾಂಗ್ರೆಸಿನವರಿಗೆ ದಿನಕ್ಕೊಂದು ನೋಟಿಸ್
ನೀಡುವ ರಾಜ್ಯಪಾಲರು ಬಿಜೆಪಿಯವರಿಗೆ
ಏನೂ ಕೇಳುವುದಿಲ್ಲ. ರಾಜ್ಯಪಾಲರ ಕಚೇರಿ
ಬಿಜೆಪಿ ಕಚೇರಿ ಆಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಕೆ.ಜಿ. ಶಿವಕುಮಾರ್, ಬಿ. ವೀರಣ್ಣ, ಎಲ್.ಡಿ. ಗೋಣೆಪ್ಪ, ಇಟ್ಟಿಗುಡಿ ಮಂಜುನಾಥ್, ಎಸ್. ವೆಂಕಟೇಶ್, ಕಾವ್ಯ, ಕವಿತಾ ಚಂದ್ರಶೇಖರ್, ಬಿ.ಎಚ್‌. ಪರಶುರಾಮಪ್ಪ, ಎಸ್. ಮಲ್ಲಿಕಾರ್ಜುನ್, ಎಸ್. ಎಲ್. ಆನಂದಪ್ಪ, ಸುರೇಶ್ ಕೋಗುಂಡೆ, ಕೆ.ಎನ್. ಮಂಜುನಾಥ್, ಮಂಜುನಾಥ್, ಎಸ್. ಎಸ್. ಗಿರೀಶ್, ನಂಜಾನಾಯ್ಕ, ಎಚ್. ಜಯಣ್ಣ, ಸಯೀದ್ ಚಾರ್ಲಿ, ಆದಿಲ್ ಖಾನ್, ರವೀಂದ್ರ, ಜಯಶ್ರೀ, ಡಿ. ಶಿವಕುಮಾರ್, ಆರ್. ಪ್ರತಾಪ್, ಜಿ.ಸಿ. ನಿಂಗಪ್ಪ, ರೇವಣಸಿದ್ದಪ್ಪ, ಲಿಯಾಖತ್ ಅಲಿ ಇತರ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...