ದಾವಣಗೆರೆ | ‌ʼತಾಯಿ-ಮಗಳ ಸ್ಪರ್ಧೆʼ ಎಂಬ ಗಾಯತ್ರಿ ಸಿದ್ದೇಶ್ವರ್ ಭಾವನಾತ್ಮಕ ದಾಳ; ಕಾಂಗ್ರೆಸ್ ಅಭ್ಯರ್ಥಿ ತಿರುಗೇಟು

Date:

ತಾಯಿ ಮಗಳ ಸ್ಪರ್ಧೆ ಎಂಬ ಭಾವನಾತ್ಮಕ ದಾಳ ಉರುಳಿಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು ನೀಡಿದ್ದಾರೆ. “ಭಾರತೀಯ ಸಂಸ್ಕೃತಿಯಲ್ಲಿ ತಾಯಿ ಮಗಳ ಸಂಬಂಧಕ್ಕೆ ಬೆಲೆ ಇದೆ, ಗೌರವ ಇದೆ. ಆದರೆ ಚುನಾವಣೆಯೆಂದ ಮೇಲೆ ಗೆಲುವಿಗೆ ಹೋರಾಟ ಮಾಡುವುದಷ್ಟೇ ಮುಖ್ಯ” ಎಂದು ಹೇಳಿದ್ದಾರೆ.

ದಾವಣಗೆರೆಯ ಎಂಸಿಸಿಬಿ ಬ್ಲಾಕ್‌ನಲ್ಲಿನ ನಿವಾಸದ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕೆಂಬುದನ್ನು ಪ್ರಜ್ಞಾವಂತ ಮತದಾರರು ನಿರ್ಧರಿಸುತ್ತಾರೆ. ಚುನಾವಣೆಯಲ್ಲಿ ಸಂಬಂಧಕ್ಕಿಂತ ಜನರ ಸೇವೆ ಮುಖ್ಯ. ಕಷ್ಟ, ಸುಖದಲ್ಲಿ ಭಾಗಿಯಾಗುವುದು ತುಂಬಾನೇ ಪ್ರಮುಖವಾಗುತ್ತದೆ. ಪ್ರತಿಯೊಬ್ಬರನ್ನೂ ಭೇಟಿ ಮಾಡಲು ಆಗದು. ಕೇವಲ 40 ದಿನಗಳು ಮಾತ್ರ ಇದ್ದು, ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು ನನ್ನ ಗೆಲುವಿಗೆ ಶ್ರಮಿಸುವುದಾಗಿ ವಿಶ್ವಾಸವಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ʼಜನರು ಒಂದೇ ಕುಟುಂಬದ ಮೂವರಿಗೆ ಅಧಿಕಾರ ನೀಡುವುದಿಲ್ಲʼವೆಂಬ ವ್ಯಂಗ್ಯದ ಮಾತಿಗೆ ಪ್ರತಿಕ್ರಿಯೆ ನೀಡಿದ ಪ್ರಭಾ ಮಲ್ಲಿಕಾರ್ಜುನ್, “ನಾನಾಗಿ ಯಾವತ್ತೂ ಟಿಕೆಟ್ ಕೇಳಿಲ್ಲ. ಯಾರು ನಿಂತರೆ ಗೆಲುವು ಸಾಧ್ಯವೆಂಬ ಲೆಕ್ಕಾಚಾರ ಹಾಕಿ ಟಿಕೆಟ್ ಘೋಷಿಸಲಾಗಿದೆ. ಹರಪನಹಳ್ಳಿಯೂ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಎಲ್ಲರೂ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ನಮ್ಮದು ಯಾವುದೇ ಅಸ್ತ್ರ ಇಲ್ಲ, ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ. ಬಿಜೆಪಿಯವರದ್ದು ಮೋದಿ ಅಲೆ ಇದ್ದರೆ, ನಮ್ಮದು ಮಾತ್ರ ಕಾಂಗ್ರೆಸ್ ಅಲೆ. ಜನರು ಅಭಿವೃದ್ಧಿ ಕೆಲಸಗಳನ್ನು ನೋಡಿಕೊಂಡು ನಮಗೆ ಮತ ನೀಡುತ್ತಾರೆ” ಎಂದು ಪ್ರತ್ಯುತ್ತರ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ದರ್ಶನ ಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಮಾಧ್ಯಮಗಳೊಂದಿಗೆ ಮಾತನಾಡಿ, “ಇತಿಹಾಸದಲ್ಲಿ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಹಿಳೆಯರಿಗೆ ಗೆಲುವಿನ ಅವಕಾಶ ಸಿಕ್ಕಿದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಕ್ಕಿರುವುದು ಖುಷಿ ತಂದಿದೆ” ಎಂದರು.

ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಎಂಬ ಪತ್ರಕರ್ತರ ಪ್ರಶ್ನೆಗೆ ಗಾಯತ್ರಿ ಸಿದ್ದೇಶ್ವರ್ ಪ್ರತಿಕ್ರಿಯೆ ನೀಡಿದ್ದು, “ಹೌದು ಶಾಮನೂರು ಕುಟುಂಬಕ್ಕೆ ಬೀಗರು ಆಗುತ್ತೇವೆ. ನಾನು ತಾಯಿ ಸ್ಥಾನದಲ್ಲಿದ್ದೇನೆ, ಅವರು ಮಗಳು” ಎಂದು ಗಾಯತ್ರಿ ಸಿದ್ದೇಶ್ವರ್ ಭಾವನಾತ್ಮಕ ದಾಳ ಉರುಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...