ದಾವಣಗೆರೆ | ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜೀನಾಮೆಗೆ ಸಿಪಿಐ ಆಗ್ರಹ

Date:

ದೇಶದ ಇತಿಹಾಸ, ಚರಿತ್ರೆ ತಿಳಿಯದ, ಸಂಸ್ಕೃತಿ ಮತ್ತು ಸಹಬಾಳ್ವೆಯ ಪರಿಚಯವಿಲ್ಲದ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಅಂಬೇಡ್ಕರ್ ಅವರಿಗೆ ನಿಂದನೆಯಾಗುವ ರೀತಿಯಲ್ಲಿ ಮಾತನಾಡಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಪ್ರತಿಭಟನೆ ನಡೆಸಿತು.

ನಗರದ ಅಶೋಕ ರಸ್ತೆಯ ಪಂಪಾಪತಿ ಭವನದಿಂದ ಬೆಳಿಗ್ಗೆ 11:30ಕ್ಕೆ ಹೊರಟ ಪ್ರತಿಭಟನಾಕಾರರು ಗಾಂಧಿ ಸರ್ಕಲ್‌ಗೆ ತೆರಳಿ ಬಹಿರಂಗ ಸಭೆ ನಡೆಸಿ, ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ “ಗೃಹಮಂತ್ರಿ ಅಮಿತ್ ಶಾಗೆ ದೇಶದ ಇತಿಹಾಸ, ಚರಿತ್ರೆ ತಿಳಿದಿಲ್ಲ. ಅವರು ದೇಶದ ಸಂಸ್ಕೃತಿ ಮತ್ತು ಸಹಬಾಳ್ವೆಯ ಪರಿಚಯವಿಲ್ಲದ ಹಾಗೂ ವ್ಯಾಪಾರಿ ಮನೋಭಾವ ಹೊಂದಿರುವ ವ್ಯಕ್ತಿ. ಅವರು ಸಂಸತ್ತಿನಲ್ಲಿ ಅಂಬೇಡ್ಕರ್ ಕುರಿತು ಹೇಳಿರುವ ಮಾತು ಖಂಡನೀಯ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಸಂಸತ್‌ನಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಕೇಂದ್ರ ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಉಮೇಶ್ ಆವರಗೆರೆ ಮಾತನಾಡಿ, “ಅಂಬೇಡ್ಕರ್ ಎಂದರೆ ವ್ಯಸನವೆಂದು ಹೇಳಿರುವ ಅಮಿತ್ ಶಾ ಮೂರ್ಖರಂತೆ ಮಾತನಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕುರಿತು ಮಹಿಳೆ ಎನ್ನುವ ಗೌರವವನ್ನೂ ಕೊಡದೆ ಕೀಳುಭಾಷೆ ಬಳಸಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಂತಹ ಕೋಮುವಾದ, ದ್ವೇಷದ ಮನೋಭಾವ ಹೊಂದಿರುವ ಸಿ ಟಿ ರವಿಯನ್ನು ಕರ್ನಾಟಕ ವಿಧಾನ ಪರಿಷತ್ ಸ್ಥಾನದಿಂದ ಹಾಗೂ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಜಯಣ್ಣ, ಜಿಲ್ಲಾ ಖಜಾಂಚಿ ಮೊಹಮ್ಮದ್ ರಫೀಕ್, ಮುಖಂಡರುಗಳಾದ ಮಹಮ್ಮದ್ ಭಾಷಾ ಜಗಳೂರು, ಸಿ ರಮೇಶ್, ಶೇಖರ ನಾಯಕ, ಸುರೇಶ್, ತಿಪ್ಪೇಶ್, ಜೀವನ್, ದೇವೇಂದ್ರಪ್ಪ, ಸರೋಜಾ, ನಿಟುವಳ್ಳಿ ಬಸವರಾಜ್, ಕೆ ಜಿ ಶಿವಮೂರ್ತಿ, ತಿಮ್ಮಣ್ಣ, ಹೆಚ್ ಎಸ್ ಚಂದ್ರು, ಮರಿಯಪ್ಪ ರಂಗನಾಥ್ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...