ದಾವಣಗೆರೆ | ದಸಂಸ ಸುವರ್ಣ ಸಂಭ್ರಮೋತ್ಸವ ಕರಪತ್ರ ಬಿಡುಗಡೆ

Date:

50ನೇ ವರ್ಷದ ದಸಂಸ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆಗಸ್ಟ್‌ 07ರ ಬುಧವಾರ ಬೆಂಗಳೂರಿನ ರಾಜ್ಯ ಸಮಿತಿ ಡಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಸಂಸ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ್ ಕುಂದುವಾಡ ಕರೆ ನೀಡಿದರು.

ದಾವಣಗೆರೆಯಲ್ಲಿ ನೆಡೆದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, “ದಸಂಸದ 50ನೇ ವರ್ಷದ ಸುವರ್ಣ ಸಂಭ್ರಮೋತ್ಸವ ಸ್ಮರಣೀಯವಾಗಲು ನಾವೆಲ್ಲರೂ ಶ್ರಮಿಸಬೇಕಾಗಿದೆ. ದಸಂಸ ಸಂಸ್ಥಾಪನೆಯೇ ಸಮಾಜದ ಪರಿವರ್ತನೆ. ಶೋಷಿತ ಜನರ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಈ ನಿಟ್ಟಿನಲ್ಲಿ ಕಳೆದ 50 ವರ್ಷಗಳಿಂದ ದಸಂಸ ಶ್ರಮಿಸುತ್ತಿದೆ. ನಾವು ಇದರ ಭಾಗವಾಗಿರುವುದಕ್ಕೆ ಹೆಮ್ಮೆಪಡಬೇಕು. ಇಡೀ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಸುಮಾರು 500 ಮಂದಿಯನ್ನು ಕರೆದುಕೊಂಡು ಹೋಗಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ ತೀರ್ಪು ಶೀಘ್ರ ಜಾರಿಗೊಳ್ಳಬೇಕು: ದಸಂಸ ಮುಖಂಡ ಹೆಚ್ ಮಲ್ಲೇಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಪ್ರದೀಪ್ ಕೆ ಟಿ ಜೆ ನಗರ, ಮಂಜುನಾಥ್ ಆರ್, ತಿಪ್ಪೇಶ್ ತಿಮ್ಮನಹಳ್ಳಿ, ಬಸವರಾಜ್ ಕತ್ತಲಗೆರೆ, ತಾಲೂಕು ಸಂಚಾಲಕರಾದ ಮಹಾಂತೇಶ್ ಪಿ ಜೆ ಕುಬೇಂದ್ರಪ್ಪ, ಪರಮೇಶ್, ತಾಲೂಕು ಮಹಿಳಾ ಸಂಚಾಲಕಿ ಆರತಿ ಎಸ್, ತಾಲೂಕು ಸಂಘಟನಾ ಸಂಚಾಲಕರುಗಳಾದ ನಾಗರಾಜ್ ಬಿ ಚಿತ್ತಾನಹಳ್ಳಿ, ಶಿವಶಂಕರ ಎಸ್ ಎಂ, ಸ್ಲಮ್ ಸಂಚಾಲಕ ನಾಗರಾಜ್ ಆನೆಕೊಂಡ, ರಂಗಪ್ಪ, ಪಾಂಡು, ಬಸವರಾಜ್, ವಿನೋದ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...