ದಾವಣಗೆರೆ | 2ಎ ಮೀಸಲಾತಿಗೆ ಆಗ್ರಹ; ಡಿ.10ರಂದು ಸುವರ್ಣ ಸೌಧ ಮುತ್ತಿಗೆಗೆ ನಿರ್ಧಾರ

Date:

ಕೂಡಲ ಸಂಗಮದ ಜಯಮತ್ಯುಂಜಯ ಶ್ರೀಗಳ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಇದೇ ಡಿಸೆಂಬರ್‌ 10ರಂದು ನಡೆಯಲಿರುವ ಬೃಹತ್‌ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಹಾಕುವ ಏಳನೇ ಹಂತದ ಹೋರಾಟಕ್ಕೆ ದಾವಣಗೆರೆ ಜಿಲ್ಲೆಯಿಂದ ಒಂದು ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್ ವಿ ಅಶೋಕ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “2ಎ ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಾಲ್ಕು ವರ್ಷದಿಂದ ಆರನೇ ಹಂತದವರೆಗೂ ಹೋರಾಟ ಮಾಡಿದ್ದೇವೆ. ಸರ್ಕಾರ ಈ ಹಿಂದೆ 2ಎ ಮೀಸಲಾತಿಗೆ ನಡೆದ ಹೋರಾಟದ ಸಮಯದಲ್ಲಿ ಕೇವಲ ಭರವಸೆಯನ್ನು ನೀಡುತ್ತ, ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ” ಎಂದರು.

ಮೀಸಲಾತಿಗೆ ಹೋರಾಟ

“ಪಂಚಮಸಾಲಿ ಸಮಾಜ ಬೇಸತ್ತಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಅಧಿವೇಶನದಲ್ಲಿಯೇ ಪಂಚಮಸಾಲಿಗಳಿಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಸಮಾಜದ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

“ಕೂಡಲಸಂಗಮ ಶ್ರೀಗಳ ನೇತೃತ್ವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಯಕತ್ವದಲ್ಲಿ ಈ ಹೋರಾಟ ಏಳನೇ ಹಂತ ತಲುಪಿದೆ. ಈ ಹೋರಾಟಕ್ಕೆ ರಾಜ್ಯದ ಎಲ್ಲ ಪಂಚಮಸಾಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುತ್ತಿಗೆ ಹೋರಾಟ ಯಶಸ್ವಿ ಮಾಡಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪಂಚಮಸಾಲಿ ಮಹಾಸಭಾದ ಪದಾಧಿಕಾರಿಗಳಾದ ಮಂಜು ಪೈಲ್ವಾನ್, ಎಚ್ ಕೆ ಗಿರೀಶ್ ಮರಡಿ, ಶಂಕರ್, ವೀರೇಶ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...