ದಾವಣಗೆರೆ | ಅಡುಗೆ ತಯಾರಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ; ಇಒ ಭರವಸೆ

Date:

ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಸಿಯೂಟ ತಯಾರಕರ ಫೆಡರೇಶನ್ ಸಮಿತಿ ಕಾರ್ಯಕರ್ತರು ದಾವಣಗೆರೆ ತಾಲೂಕು ಮಧ್ಯಾಹ್ನ ಉಪಾಹಾರ ಯೋಜನೆ ಸಹಾಯಕ ನಿರ್ದೇಶಕರು ಮತ್ತು ತಾಲೂಕು ಪಂಚಾಯತ್‌ ಕಾರ್ಯನಿರ್ವಣಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ದಾವಣಗೆರೆ ತಾಲೂಕಿನ ಎಲ್ಲ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ಜುಲೈ 31 ಬಂದರೂ ಜುಲೈ ತಿಂಗಳ ವೇತನ ಪಾವತಿಯಾಗಿಲ್ಲ. ವೇತನವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಹಾಗಾಗಿ ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಅವರಗೆರೆ ಚಂದ್ರು ಮಾತನಾಡಿ, “ಜುಲೈ ತಿಂಗಳು ಮುಗಿದರೂ ಜೂನ್‌ ತಿಂಗಳ ವೇತನ ಬಿಡುಗಡೆಯಾಗಿಲ್ಲ. ಬೆಲೆ ಏರಿಕೆ, ಹಣದುಬ್ಬರ, ಶಿಕ್ಷಣದ ಖರ್ಚು ಸೇರಿದಂತೆ ಇನ್ನಿತರ ಖರ್ಚು ವೆಚ್ಚಗಳು ಹೆಚ್ಚಾಗಿರುವ ಈ ಕಾಲದಲ್ಲಿ ಬಿಸಿಯೂಟದ ವೇತನ ನಂಬಿ ಬದುಕುತ್ತಿರುವ ಬಿಸಿಯೂಟ ತಯಾರಿಕರಿಗೆ ವೇತನವಿಲ್ಲದೆ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಆದ ಕಾರಣ ಕೂಡಲೇ ಸರ್ಕಾರ ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ಮಾತನಾಡಿ, “ಎರಡು ತಿಂಗಳ ವೇತನಗಳಿಲ್ಲದೆ ನಮಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳ ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಖರ್ಚು ಸೇರಿದಂತೆ ಇತರೆ ಸಮಸ್ಯೆಗಳೂ ಹೆಚ್ಚಾಗಿವೆ. ಹಾಗಾಗಿ ಕೂಡಲೇ ವೇತನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ್ದು, ಮನವಿ ಪರಿಗಣಿಸಿ ಸಂಬಂಧಪಟ್ಟ ಮೇಲಧಿಕಾರಿಗಳ ಜೊತೆ ಶೀಘ್ರದಲ್ಲಿ ಮಾತನಾಡಿ ಒಂದು ವಾರದ ಒಳಗಾಗಿ ಬಾಕಿ ಇರುವ ಮತ್ತು ಜುಲೈ ತಿಂಗಳ ವೇತನವನ್ನೂ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...