ದಾವಣಗೆರೆ | ಭದ್ರಾ ಜಲಾಶಯದ ಸುರಕ್ಷತೆಗೆ ಒತ್ತಾಯ; ಜು.24ರಂದು ಬೃಹತ್ ಪ್ರತಿಭಟನೆ

Date:

ಭದ್ರಾ ಜಲಾಶಯದ ಸುರಕ್ಷತೆಗೆ ಆದ್ಯತೆ, ಸೋರಿಕೆ ತಡೆಗಟ್ಟಲು ಹಾಗೂ ಡ್ಯಾಂ ನೀರು ಬಿಡುಗಡೆಗೆ ಒತ್ತಾಯಿಸಿ ಜುಲೈ 24ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.

ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅಧ್ಯಕ್ಷತೆಯಲ್ಲಿ ದಾವಣಗೆರೆಯ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ರೈತ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಉತ್ತಮ ಮಳೆಯಾದ ಕಾರಣ ಸದ್ಯ ಜಲಾಶಯದ ನೀರಿನ ಮಟ್ಟ 165 ಅಡಿ ಇದ್ದು, ರೈತರಿಗೆ ಭತ್ತ ಬೆಳೆಗೆ ನೀರು ಒದಗಿಸುವಂತೆ ಒತ್ತಾಯಿಸಿ, ಈ ಹೋರಾಟ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ರೈತ ಮುಖಂಡ, ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಮಾತನಾಡಿ, “ಮಲೆನಾಡಿನಲ್ಲಿ ಉತ್ತಮ ಮಳೆ ಸುರಿದು ಭದ್ರಾ ಜಲಾಶಯಕ್ಕೆ ಉತ್ತಮ ಒಳಹರಿವು ಇದ್ದು, ಜುಲೈ ತಿಂಗಳಲ್ಲಿಯೇ ಹೆಚ್ಚು ನೀರು ಬಂದಿದೆ. ಜಲಾಶಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮುಂದೆ ಇನ್ನೂ ಅರ್ಧದಷ್ಟು ಮಳೆಗಾಲ ಇರುವುದರಿಂದ ಜಲಾಶಯದಿಂದ ಭದ್ರಾ ಅಚ್ಚುಕಟ್ಟುದಾರರಿಗೆ ನೀರೊದಗಿಸಬೇಕು. ಭದ್ರಾ ಜಲಾಶಯ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ರೈತರ, ಜನರ ಜೀವನಾಡಿಯಾಗಿದ್ದು, ಇದರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು”
ಎಂದು ಒತ್ತಾಯಿಸಿದರು.

“ಭದ್ರಾ ಜಲಾಶಯದಲ್ಲಿ ಸ್ಲೂಯಿಸ್ ಗೇಟ್ ಮೂಲಕ ನೀರು ಸೋರಿಕೆಯಾಗಿದ್ದು ರೈತರ, ಜನರ ಆಕ್ರೋಶಕ್ಕೆ ಕಾರಣವಾಗಿತ್ತು. 15-20 ಸಾವಿರ ಕ್ಯೂಸೆಕ್ ನೀರು ಹರಿದು ಹೋಗಿದೆ ಎಂಬ ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರೈತರ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶವನ್ನೂ ವ್ಯಕ್ತಪಡಿಸಿತ್ತು. ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ನೀರಿನ ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, “ಈಗ ಸದ್ಯ ಜಲಾಶಯದ ನೀರಿನ ಮಟ್ಟ 165 ಅಡಿ ಇದ್ದು, ಆಗಸ್ಟ್ 1ರ ಹೊತ್ತಿಗೆ 170 ಅಡಿ ಆಗುವ ತನಕ ಕಾಯ್ದಿದ್ದು, ಯಾವುದು ಮೊದಲು ಆಗುತ್ತದೆಯೋ ಆನಂತರ ಐಸಿಸಿ ಸಭೆ ಕರೆದು ಅಲ್ಲಿ ಬೇಸಿಗೆಯ ದೂರದೃಷ್ಟಿ ಕುರಿತಂತೆ ಆಲೋಚಿಸಿ ಸಮಂಜಸವಾದ ತೀರ್ಮಾನಗಳನ್ನು ತೆಗೆದುಕೊಂಡು ರೈತರಿಗೆ ನೀರನ್ನು ಹರಿಸಬೇಕು. ಇಲ್ಲದಿದ್ದರೆ ಬೇಸಿಗೆಯಲ್ಲಿ ರೈತರಿಗೆ ನೀರೊದಗಿಸಲು ಸಮಸ್ಯೆಯಾಗುತ್ತದೆ. ರಾಜ್ಯ ಸರ್ಕಾರ ಜಲಾಶಯದ ಗೇಟ್‌ಗಳ ಮತ್ತು ಇನ್ನಿತರ ದುರಸ್ತಿಗೆ ಶೀಘ್ರ ಹಣ ಬಿಡುಗಡೆ ಮಾಡಬೇಕು. ಕಳೆದ ಬಾರಿಯ ಬಜೆಟ್ ವಾಗ್ದಾನದಂತೆ ಕೇಂದ್ರ ಸರ್ಕಾರ 5,300 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಈ ಬಾರಿ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಿಲ್ಲಾಸ್ಪತ್ರೆಯಲ್ಲಿ ರಾಶಿ ರಾಶಿ ಕಸದ ಮೂಟೆ : ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತರಾಟೆ

ಸಭೆಯಲ್ಲಿ ರೈತ ಮುಖಂಡರಾದ ತೇಜಸ್ವಿ ಪಟೇಲ್, ಕೊಳೇನಹಳ್ಳಿ ಬಿ ಎಂ ಸತೀಶ್, ನಾಗೇಶ್ವರರಾವ್, ಬಸವರಾಜ ನಾಯ್ಕ, ಲೋಕಿಕೆರೆ ನಾಗರಾಜ್, ಧನಂಜಯ ಕಡ್ಲೆಬಾಳ್, ಚಂದ್ರಶೇಖರ್ ಪೂಜಾರ ಸೇರಿದಂತೆ ಬಹುತೇಕ ಮಂದಿ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...