ದಾವಣಗೆರೆ | ಜಮೀನಿನ ಪಹಣಿ ಸರಿಪಡಿಸುವಂತೆ ರೈತ ಸಂಘ ಮನವಿ

Date:

ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿ 26 ಗುಂಟೆ ಜಾಗವನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ತೀವ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬುಳ್ಳಾಪುರದ ಹನುಮಂತಪ ಎಚ್ಚರಿಕೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೊಗ್ಗನೂರು ಗ್ರಾಮದ ನಿಂಗಮ್ಮ, ಬಸಮ್ಮ, ಕೆಂಚಪ್ಪ ಅವರಿಗೆ ಸೇರಿದ ಸರ್ವೇ ನಂಬರ್ 1 ರಲ್ಲಿ 2 ಎಕರೆ 19 ಗುಂಟೆ ಜಮೀನಿದ್ದು, ರಾಷ್ಟ್ರೀಯ ಹೆದ್ದಾರಿಗೆ 14 ಗುಂಟೆ ಹೋಗಿದೆ. ಆದರೆ, ಪಹಣಿಯಲ್ಲಿ 12 ಗುಂಟೆ ತೋರಿಸುತ್ತಿದೆ. ಕೊಗ್ಗನೂರು ಬಸಮ್ಮ ಅವರಿಂದ ಎರಡು ಗುಂಟೆ ಇಂಡೀಕರಣೆ ಮಾಡಿ, ನಿಂಗಮ್ಮ ಅವರಿಗೆ ಸೇರಿದ ಜಮೀನಿಗೆ 26 ಗುಂಟೆಯನ್ನು ಪಹಣಿಯಲ್ಲಿ ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

“ಪಹಣಿ ಸರಿಪಡಿಸುವಂತೆ ಕೋರಿ ನಿಂಗಮ್ಮ ಮತ್ತು ಅವರ ಮಗ ಹಾಲೇಶ್ ಕಳೆದ ಒಂದು ವರ್ಷದಿಂದ ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ. ರೈತ ಸಂಘದ ಗಮನಕ್ಕೆ ತಂದ ನಂತರ ತಹಶೀಲ್ದಾರ್ ಅವರನ್ನು ಭೇಟಿ ಮಾಡಿದಾಗ ಒಂದು ವಾರದಲ್ಲೇ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಆಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಂಘದಿಂದ ಹಮ್ಮಿಕೊಳ್ಳಲಾಗುವ ಹೋರಾಟದ ಬ್ಯಾನರ್ ಅನ್ನು ಮೇ 20ರಂದು ತಹಶೀಲ್ದಾರ್ ಕಚೇರಿ ಮುಂದೆ ಕಟ್ಟಲಾಗುವುದು. ನಮ್ಮ ಹೋರಾಟ ಮುಗಿಯುವವರೆಗೆ ನಮ್ಮ ಸಂಘದ ಬ್ಯಾನರ್‌ಗೆ ಏನೇ ಆದರೂ ತಹಶೀಲ್ದಾರ್ ಅವರೇ ನೇರ ಹೊಣೆಯಾಗುತ್ತಾರೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಮೀನು ಮಾರಾಟ ನಿಲ್ಲಿಸಿ ಒಕ್ಕಲುತನ ಉಳಿಸಿ: ಆದಿ ಚುಂಚನಗಿರಿ ಶ್ರೀಗಳ ಕರೆ

ಎಸ್ ಟಿ ಪರಮೇಶ್ವರಪ್ಪ, ಐಗೂರು ಶಿವಮೂರ್ತಪ್ಪ, ಕೊಗ್ಗನೂರು ಹನುಮಂತಪ್ಪ, ಕರಿಲಕ್ಕೇನಹಳ್ಳಿ ಹನುಮಂತಪ್ಪ, ಸಿಡ್ಲಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...