ದಾವಣಗೆರೆ | ಭದ್ರಾ ಜಲಾಶಯದಿಂದ ನೀರು ಹರಿವು; ಇಮ್ಮಡಿಯಾದ ರೈತರ ಸಂತಸ

Date:

ಕಳೆದ ವರ್ಷ ಬೆಳೆಗಳಿಗೆ ನೀರುಣಿಸಲು ಹರಸಾಹಸಪಟ್ಟಿದ್ದ ಭದ್ರಾ ಜಲಾಶಯ ರೈತರಿಗೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಂತ ತಲುಪಿರುವುದು ನಿಟ್ಟುಸಿರು ಬಿಡುವಂತಾಗಿದೆ. ಭದ್ರಾ ಡ್ಯಾಂನಿಂದ ಇಂದಿನಿಂದಲೇ ಎಡ-ಬಲದಂಡೆ ನಾಲೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದ್ದು, ಸಂತಸ ತಂದಿದೆ. ಕಾಡಾ ಕಚೇರಿಯಲ್ಲಿ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.

“ಕಳೆದ ಬಾರಿ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದರು. ಈ ಬಾರಿ ಜಿಲ್ಲೆಯ ಎಲ್ಲ ಡ್ಯಾಂಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಕಳೆದ ಬಾರಿ ಕೆಲವೊಂದು ಅಂಚಿನ, ಕೊನೆ ಹಂತದ ಪ್ರದೇಶಗಳಿಗೆ ನೀರು ತಲುಪಿಲ್ಲವೆಂಬ ಆರೋಪದ ಹಿನ್ನಲೆಯಲ್ಲಿ ಇಂದಿನಿಂದಲೇ ನಿರಂತರವಾಗಿ ನೀರು ಬಿಡಲು ಎಲ್ಲಾ ಸದಸ್ಯರು ಸೇರಿ ತೀರ್ಮಾನಿಸಿದ್ದಾರೆ. ರೈತರ ಜೊತೆ ಈಗಾಗಲೇ ಚರ್ಚೆ ಮಾಡಿದ್ದು, ಅನೇಕ ಕಡೆ ಭತ್ತವನ್ನು ನಿಲ್ಲಿಸಿ ಅಡಿಕೆ ಬೆಳೆ ಮಾಡಲಾಗಿದೆ. ಬೇಸಿಗೆಯಲ್ಲಿ ಅಡಿಕೆಗೆ ಹೆಚ್ಚು ನೀರು ಬೇಕಾಗುತ್ತದೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ನೀರಾವರಿ ಎಂಜಿನಿಯರ್‌ಗಳು ಸೂಕ್ತಕ್ರಮ ಕೈಗೊಳ್ಳಬೇಕು” ಎಂದು ಚರ್ಚೆಯಾಗಿದೆ.

“ಚಾನಲ್‌ನಿಂದ ಅನಧಿಕೃತ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯುತ್ತಿದ್ದು, ಅದನ್ನು ನಿಲ್ಲಿಸಲು ಆ ಜಿಲ್ಲೆಯ ಜಿಲ್ಲಾಧಿಕಾರಿಗೆ ಅಧಿಕಾರ ನೀಡಿದ್ದೇವೆ. ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬೆಳೆಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮಳೆಗೆ ಅನುಗುಣವಾಗಿ ನೀರು ಹರಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಸಲಹ ಸಮಿತಿಯಲ್ಲಿ ತೀರ್ಮಾನಿಸಿದಂತೆ ನೀರು ಬಿಡುವುದಾಗಿ ತೀರ್ಮಾನಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಯೋಜನೆಯ ಹೆಸರಿನಲ್ಲಿ ಹಣ ವಸೂಲಿ: ಪಿಡಿಒ ಶಂಶುದ್ದೀನ್ ವಿರುದ್ಧ ಆರೋಪ

ಈ ಸಭೆಯಲ್ಲಿ ಕಾಡಾ ಅಧ್ಯಕ್ಷ ಡಾ. ಅಂಶುಮಾನ್, ಹರಿಹರ ಶಾಸಕ ಹರೀಶ್, ಹೊನ್ನಾಳಿ ಶಾಸಕ ಶಾಂತನಗೌಡ, ಮಾಯಕೊಂಡ ಶಾಸಕ ಬಸವಂತಪ್ಪ, ಹಾಗೂ ಕಾಡಾದ ಇತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...