ದಾವಣಗೆರೆ | ನ್ಯಾಯವಾದಿಗಳಿಗೆ ‘ನ್ಯಾಯ ವಿಜ್ಞಾನ’ ಉಪನ್ಯಾಸ ಮಾಲಿಕೆ ಕಾರ್ಯಕ್ರಮ

Date:

ಪ್ರಸ್ತುತ ದಿನಮಾನಗಳಲ್ಲಿ ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಕ್ಷೀಣಿಸುತ್ತಿದ್ದು, ಇವುಗಳನ್ನು ಬೆಳೆಸಿಕೊಂಡಲ್ಲಿ ಮಾತ್ರವೇ ವ್ಯಕ್ತಿ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ನಟರಾಜ್ ಸಲಹೆ ನೀಡಿದರು.

ದಾವಣಗೆರೆ ನಗರದ ವಕೀಲರ ಸಾಂಸ್ಕೃತಿಕ ಸಮುದಾಯಭವನದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ನ್ಯಾಯವಾದಿಗಳಿಗೆ ನ್ಯಾಯ ವಿಜ್ಞಾನ ಉಪನ್ಯಾಸಮಾಲಿಕೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ಒಂದು ವಿಶ್ವವಿದ್ಯಾನಿಲಯ ಮಾಡುವ ಕೆಲಸವನ್ನು ದಾವಣಗೆರೆ ಜಿಲ್ಲಾ ವಕೀಲರ ಸಂಘ ಮಾಡುತ್ತಿದೆ. ಉಪನ್ಯಾಸ ಮಾಲಿಕೆಗಳನ್ನು ಆಯೋಜಿಸುವ ಮೂಲಕ ನ್ಯಾಯವಾದಿಗಳಿಗೆ ಉತ್ತಮ ಮಾಹಿತಿ ನೀಡುತ್ತಿದ್ದು, ಸಂಘದ ಕಾರ್ಯ ಶ್ಲಾಘನೀಯ. ಮೂಲ ಸೌಕರ್ಯ ಅಭಿವೃದ್ಧಿ ಆದಂತೆ ವಕೀಲರ ಕೌಶಲ್ಯ ಕೂಡ ಹೆಚ್ಚಾಗಬೇಕು. ಇದಲ್ಲದೇ ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಕಿರಿಯ ವಕೀಲರು ತಮ್ಮ ಜ್ಞಾನಾರ್ಜನೆಯನ್ನು ವೃದ್ಧಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್ ಹೆಗಡೆ ಮಾತನಾಡಿ, “ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಿಂದ ಕಿರಿಯ ವಕೀಲರಿಗೆ ಅನುಕೂಲವಾಗಿದೆ” ಎಂದು ಹೇಳಿದರು.

ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶ ಎನ್ ಶ್ರೀಪಾದ ಮಾತನಾಡಿ, “ನ್ಯಾಯಾಧೀಶರು, ವಕೀಲರು, ಪೊಲೀಸರು ಮತ್ತು ವೈದ್ಯರಿಗೆ ಇಂತಹ ಉಪನ್ಯಾಸ ಮಾಲಿಕೆಗಳು ಅಗತ್ಯವಾಗಿ ಬೇಕು. ಇಂತಹ ಉಪನ್ಯಾಸಗಳಿಂದ ವಕೀಲರು ತಮ್ಮ ಪ್ರಕರಣಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಾ.31ರಂದು ʼಮೌನವೂ ಪಿಸುಗುಟ್ಟಿದಾಗʼ ಕಾವ್ಯ ಸಂಕಲನ ಬಿಡುಗಡೆ

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣ್ ಕುಮಾರ್ ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ಯುವ ವಕೀಲರಿಗೆ ನ್ಯಾಯ ವಿಜ್ಞಾನದ ಅರಿವು ಅಗತ್ಯವಾಗಿದ್ದು, ಕಾಲಕಾಲಕ್ಕೆ ಕಾನೂನು ಜ್ಞಾನವನ್ನು ಹರಿತಗೊಳಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ವಕೀಲರ ಸಂಘ ಆಯೋಜಿಸಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣವರ್, ಕೆ ದಶರಥ್, ಶಿವಪ್ಪ ಸಲಗೆರೆ, ಪ್ರವೀಣ್‌ ಕುಮಾರ್, ವಕೀಲರ ಸಂಘದ ಎ ಎಸ್ ಮಂಜುನಾಥ್, ಬಸವರಾಜ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...