ದಾವಣಗೆರೆ | ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಮುಖ್ಯ ಶಿಕ್ಷಕಿ ಸೇರಿ ಇಬ್ಬರ ಅಮಾನತು

Date:

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ದೈಹಿಕ ಶಿಕ್ಷಕರನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರ ವರದಿ ಅನ್ವಯ ಅಮಾನತು ಮಾಡಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ ದೈಹಿಕ ಶಿಕ್ಷಕ ಮಂಜುನಾಥ ಅಮಾನತುಗೊಂಡವರು.

ಶಾಲಾ ಮಕ್ಕಳಿಗೆ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದ ಎಲ್ಲಾ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂದು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿತರಣೆ ಮಾಡಿದ ಬಗ್ಗೆ ಆಯಾ ದಿನದಂದು ಎಸ್‍ಎಟಿಎಸ್ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತದೆ. ನವೆಂಬರ್ 13 ರಂದು ಶಾಲೆಯಲ್ಲಿ ಭೌತಿಕವಾಗಿ 87 ಮಕ್ಕಳಿದ್ದು ಇದರಲ್ಲಿ 79 ಮೊಕ್ಕಳಿಗೆ ಮೊಟ್ಟೆ ವಿತರಣೆ ಮಾಡಿ ಉಳಿದ 8 ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗಿರುತ್ತದೆ. ಆದರೆ ಎಸ್‍ಎಟಿಎಸ್ ತಂತ್ರಾಂಶದಲ್ಲಿ 104 ಮಕ್ಕಳಿರುತ್ತಾರೆ ಎಂದು ದಾಖಲು ಮಾಡಿರುವುದು ಕಂಡು ಬಂದಿದ್ದು ಮೊಟ್ಟೆ ವಿತರಣೆಯಲ್ಲಿ ಲೋಪವಾಗಿರುತ್ತದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶಾಲೆಗೆ ಭೇಟಿ ನೀಡಿದಾಗ ಕಂಡು ಬಂದಿತ್ತು.

ಇದನ್ನು ಓದಿದ್ದೀರಾ? ಬಿಜೆಪಿಯ ‘ಏಕ್ ಹೆ ತೊ ಸೇಫ್‌ ಹೇ’ ಘೋಷಣೆಯನ್ನು ರಾಹುಲ್ ಗಾಂಧಿ ವಿವರಿಸಿದ್ದು ಹೀಗೆ

ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ ಮೇರೆಗೆ ಅಮಾನತು ಮಾಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...