ಸಂವಿಧಾನ ಅಂಬೇಡ್ಕರ್ ನೀಡಿದ ನಮ್ಮ ದೇಶದ ಶ್ರೇಷ್ಠ ಗ್ರಂಥ. ಇದನ್ನು ಅಳವಡಿಸಿಕೊಂಡು 70 ವರ್ಷ ಕಳೆದಿವೆ. ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಇದರ ಆಶಯಗಳನ್ನು ಪ್ರತಿಯೊಬ್ಬರಿಗೂ ಮುಟ್ಟಿಸುವ ಕಾರ್ಯ ನಿರ್ವಹಿಸಿ, ಎಲ್ಲರೂ ಅದರ ಅನುಷ್ಠಾನಕ್ಕೆ ಶ್ರಮಿಸಬೇಕಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಹೇಳಿದರು.
ದಾವಣಗೆರೆ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಿಸಿದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಈ ಸಮಾರಂಭದಲ್ಲಿ ಮಹಿಳಾ ಜಿಲ್ಲಾ ಸಂಚಾಲಕಿ ವಿಜಯಲಕ್ಷ್ಮಿ, ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಜಿಲ್ಲಾ ಸಂಘಟನಾ ಸಂಚಾಲಕ ಪ್ರದೀಪ್ ಕೆಟಿಜಿ ನಗರ, ಮಹಾಂತೇಶ್ ಹಾಲುವರ್ತಿ, ಜಿಲ್ಲಾ ಖಜಾಂಚಿ ಮಂಜುನಾಥ್ ಆರ್, ತಾಲೂಕು ಸಂಘಟನಾ ಸಂಚಾಲಕ ನಾಗರಾಜ್ ಬಿ ಚಿತ್ತನಹಳ್ಳಿ, ಮಂಜುನಾಥ್ ನೀರ್ತಡಿ, ಶಿವಶಂಕರ್, ಆರತಿ, ಮಲ್ಲೇಶ್ ಎಚ್ ಹಾಗೂ ಇತರರು ಇದ್ದರು.





