ದಾವಣಗೆರೆ | ಕನಕದಾಸರು ಕುರುಬರಾಗಿ ಉಳಿಯಲಿಲ್ಲ, ವಿಶ್ವಮಾನವರಾದರು: ಸಿಎಂ ಸಿದ್ದರಾಮಯ್ಯ

Date:

ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ. ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ. ಹಾಗಾಗಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಕುರುಬ ಸಮಾಜದಿಂದ ಟಿ ಬಿ ವೃತ್ತದ ಬಳಿ ನಿರ್ಮಾಣ ಮಾಡಿರುವ ಕನಕದಾಸರ ಕಂಚಿನ ಪ್ರತಿಮೆ ಅನಾವರಣ ಮಾಡಿ ಮಾತನಾಡಿದರು.

“ಕುರುಬ ಸಮಾಜ ಹಾಗೂ ಇತರೆ ಎಲ್ಲರೂ ಸೇರಿ ಕನಕದಾಸರ ಪ್ರತಿಮೆ ಸ್ಥಾಪಿಸುವ ಕಾರ್ಯ ಮಾಡಿದ್ದಾರೆ. ದಾಸಶ್ರೇಷ್ಠ ಕನಕದಾಸರ ಪ್ರತಿಮೆ ಲೋಕಾರ್ಪಣೆ ಮಾಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದರು. ಆದರೆ ಕುರುಬರಾಗಿ ಉಳಿದಿರಲಿಲ್ಲ. ವಿಶ್ವಮಾನವರಾಗಿದ್ದರು. ಆದರೆ ನಾವುಗಳು ಹುಟ್ಟಿದಾಗ ವಿಶ್ವಮಾನವರಾಗುತ್ತೇವೆ. ಕೊನೆಯಲ್ಲಿ ಅಲ್ಪಮಾನವರು. ಆದರೆ ಬುದ್ಧ, ಬಸವ, ಕನಕ, ಅಂಬೇಡ್ಕರ್, ಗಾಂಧೀಜಿ ಇವರೆಲ್ಲಾ ಜನರಿಗೆ ನೀಡಿದ ಸಂದೇಶ ವಿಶ್ವ ಮಾನವರಾಗಲು, ನಾವೆಲ್ಲರೂ ಮನುಷ್ಯರಾಗಲು ಪ್ರಯತ್ನ ಮಾಡಬೇಕು. ಒಬ್ಬರನ್ನೊಬ್ಬರು ದ್ವೇಷಿಸದೇ, ಪರಸ್ಪರ ಪ್ರೀತಿಸೋಣ” ಎಂದು ಕರೆ ನೀಡಿದರು.

“ಬಸವಾದಿ ಶರಣರು, ಕನಕದಾಸರು ಹೇಳಿದ್ದು, ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣದ ತತ್ವವನ್ನು ಸಾರಿದರು. ಇದನ್ನು ಅರಿಯಲು ವಚನಗಳು ಮತ್ತು ಕೀರ್ತನೆಗಳನ್ನು ಓದಲು ಮುಂದಾಗಬೇಕು” ಎಂದು ಕೇಳಿದರು.

“ಕನಕದಾಸರ ಪ್ರಮುಖ ಕಾವ್ಯ ಕೃತಿಗಳಾದ ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತ್ರೆ, ಹರಿಭಕ್ತಿಸಾರ ಇವುಗಳನ್ನು ಜನರು ಓದಬೇಕು. ರಾಮಧಾನ್ಯ ಭಾಮಿನಿ ಷಟ್ಟದಿಯಲ್ಲಿದ್ದು, ಕಾಯಕ ದಾಸೋಹದ ಉಲ್ಲೇಖ ಇದರಲ್ಲಿ ಸಿಗುತ್ತದೆ. ಅಕ್ಕಿ ಮತ್ತು ರಾಗಿಯಲ್ಲಿ ಯಾವುದು ಹೆಚ್ಚು ಮಹತ್ವತೆಯನ್ನು ಹೊಂದಿದೆ ಎಂಬುದು ಇದರ ಸಾರಾಂಶವಾಗಿದ್ದು, ರಾಗಿಯ ಮಹತ್ವತೆಯ ಬಗ್ಗೆ ಸಂಪೂರ್ಣ ಉಲ್ಲೇಖವಿದೆ” ಎಂದರು.

“ಕನಕದಾಸರು ಸಮಾಜ ಸುಧಾರಕ. ದಾರ್ಶನಿಕ, ವಿಶ್ವಮಾನವ. ನಾವೆಲ್ಲರೂ ಇವರ ತತ್ವಾದರ್ಶ ಆರ್ಥ ಮಾಡಿಕೊಳ್ಳಲಿ ಎಂಬುದಾಗಿ ಇಂತಹ ಪ್ರತಿಮೆಗಳ ಅನಾವರಣ ಮಾಡುವ ಕೆಲಸ ಮಾಡಲಾಗುತ್ತಿದೆ. ಇವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಇದರ ಸಾರ್ಥಕತೆಯಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೇ ಸಾಹಿತ್ಯ ಮೇಳದ 10ನೇ ಆವೃತ್ತಿ ಕುರಿತು ಸಭೆ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಡಿ ಜಿ ಶಾಂತನಗೌಡ, ವಿಧಾನ ಪರಿಷತ್ ಸದಸ್ಯ ಕೆ ಅಬ್ದುಲ್ ಜಬ್ಬರ್, ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ, ಆರ್ ಪ್ರಸನ್ನಕುಮಾ‌ರ್, ಇನ್‌ಸೈಟ್ ವಿನಯ್ ಕುಮಾರ್, ಮುಖಂಡರುಗಳಾದ ಮಂಜಪ್ಪ, ಜಯಸಿಂಹ, ಸುಭಾಷ್‌ ಚಂದ್ರ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಎಂ ಎಸ್ ಫಾಲಾಕ್ಷಪ್ಪ, ಸಿದ್ದಪ್ಪ ಹಾಗೂ ಇತರೆ ಸಮಾಜದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...