ದಾವಣಗೆರೆ | ಕಾರ್ಲ್ ಮಾರ್ಕ್ಸ್‌ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ಕೊಟ್ಟ ಮಹಾನ್ ದಾರ್ಶನಿಕ: ದಾದಾಪೀರ್ ನವಿಲೇಹಾಳ್

Date:

ಕೈಗಾರಿಕಾ ಕ್ರಾಂತಿಯ ನಂತರ ಕಾರ್ಮಿಕರ ಪರಿಸ್ಥಿತಿ ಇನ್ನೂ ಹದಗೆಟ್ಟಿತು. ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದ್ದ ಸಂದರ್ಭದಲ್ಲಿ 1886ರಲ್ಲಿ ಚಿಕಾಗೋದಲ್ಲಿ ನಡೆದ ಕಾರ್ಮಿಕರ ಹೋರಾಟವು ಅವಿಸ್ಮರಣೀಯವಾದದ್ದು. ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಕ್ಕರೆ ತಿನ್ನುವ ಅವಕಾಶವಿಲ್ಲದಂತಹ ಪರಿಸ್ಥಿತಿ ಇನ್ನೂ ಹಾಗೆಯೇ ಇದೆ. ಕಾರ್ಲ್ ಮಾಕ್ಸ್ ಅವರು ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ಕೊಟ್ಟಂತಹ ಮಹಾನ್ ದಾರ್ಶನಿಕರು ಎಂದು ಡಾ.ದಾದಾಪೀರ್ ನವಿಲೇಹಾಳ್ ಹೇಳಿದರು.

ದಾವಣಗೆರೆ ನಗರ ವನಿತಾ ಸಮಾಜದಲ್ಲಿ ಇಂದು ಕರ್ನಾಟಕ ಶ್ರಮಿಕ ಶಕ್ತಿ(ಕೆಎಸ್‌ಎಸ್‌) ಜಿಲ್ಲಾ ಘಟಕ ಹಮ್ಮಿಕೊಂಡಿದ್ದ 138ನೇ ಕಾರ್ಮಿಕ ದಿನಾಚರಣೆ ಮತ್ತು ಹಿರಿಯ ಕಾರ್ಮಿಕರಿಗೆ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿಶ್ವದ ಕಾರ್ಮಿಕರೇ ಒಂದಾಗಿ ನೀವುಗಳು ಕಳೆದುಕೊಳ್ಳುವುದು ಏನೂ ಇಲ್ಲ ಎಂಬ ಸಂದೇಶವನ್ನು ವಿಶ್ವಕ್ಕೆ ಕೊಟ್ಟಿದ್ದಾರೆ. ದಾವಣಗೆರೆಯ ಮಿಲ್ ಕಾರ್ಮಿಕರ ಹೋರಾಟದ ಉಚ್ಛ್ರಾಯ ಸ್ಥಿತಿಯಲ್ಲಿ ಇದನ್ನು ಕಾಣಬಹುದಾಗಿದೆ. 15 ವರ್ಷಗಳ ಕಾಲ ಕಾರ್ಮಿಕ ನಾಯಕ ಪಂಪಾಪತಿಯವರು ಶಾಸಕರಾಗಿ ಆಯ್ಕೆಯಾಗಿದ್ದರು ಅಂದರೆ ಕಾರ್ಮಿಕರ ಒಗ್ಗಟ್ಟಿನ ಶಕ್ತಿಯೇ ಕಾರಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಶ್ರಮಿಕ ಶಕ್ತಿಯ ಮುಖಂಡ ಸತೀಶ್ ಅರವಿಂದ್ ಮಾತನಾಡಿ, “138 ವರ್ಷಗಳ ಹಿಂದೆ ನಡೆದ ಕಾರ್ಮಿಕರ ಸಂಘರ್ಷವೇ ನಾವುಗಳು ಇಂದು ಒಟ್ಟಾಗಿ ಸೇರಲು ಮತ್ತು ಕನಿಷ್ಟ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ. ನಮ್ಮ ಮುಂದೆ ಇನ್ನೂ ಹಲವಾರು ಜಟಿಲ ಸಮಸ್ಯೆಗಳು ಇವೆ. ಅವುಗಳ ನಿವಾರಣೆಗಾಗಿ ಎಲ್ಲಾ ಅಸಂಘಟಿತ ಕಾರ್ಮಿಕರೆಲ್ಲರೂ ಒಟ್ಟಾಗಿ ಹೋರಾಟ ಮಾಡೋಣ. ಅದಕ್ಕಾಗಿ ಕರ್ನಾಟಕ ಶ್ರಮಿಕ ಶಕ್ತಿಯು ನಿಮ್ಮ ಜೊತೆ ಇರುತ್ತದೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಿಷತ್ ಚುನಾವಣೆ; ಮೈತ್ರಿಗೆ ವಿರೋಧಿ ಅಲೆ, ಕಾಂಗ್ರೆಸ್‌ಗೆ ಗೆಲ್ಲುವ ಸವಾಲು

ಇದೇ ವೇಳೆ ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಆದಿಲ್ ಖಾನ್, ಪವಿತ್ರ, ಟಿ ಹೆಚ್ ಲಕ್ಷ್ಮೀಕಾಂತ್, ಅಶ್ಫಕ್, ಮಹಮ್ಮದ್ ರಫೀಕ್, ಹನುಮಂತಪ್ಪ, ನಾಜೀಮಾ ಬಾನು, ಅಕ್ಬರ್, ಅಪ್ರೋಜ್, ವೆಂಕಟೇಶ್ ಸೇರಿದಂತೆ ಬಹುತೇಕ ಕಾರ್ಮಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...