ದಾವಣಗೆರೆ | ಒಟ್ಟಾಗಿ ಕೆಲಸ ಮಾಡೋಣ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸೋಣ; ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗ ಕರೆ 

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗ ಕರೆ ನೀಡಿತು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ಏರ್ಪಡಿಸಿದ್ದ ಸಭೆಯಲ್ಲಿ ಗೌರವಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾತನಾಡಿ, “ಪ್ರಭಾ ಮಲ್ಲಿಕಾರ್ಜುನ್ ಅವರ ಸಾಮಾಜಿಕ ಸೇವೆ ಎಲ್ಲರಿಗೂ ಗೊತ್ತಿರುವ ವಿಚಾರ. ಸೌಮ್ಯ ಸ್ವಭಾವದವರಾಗಿದ್ದು, ವಿದ್ಯಾವಂತರಾಗಿದ್ದಾರೆ. ದಾವಣಗೆರೆ ಜನತೆಗೆ ಬಹು ಅಗತ್ಯವಾಗಿರುವಂತಹ ವ್ಯಕ್ತಿಯಾಗಿದ್ದು, ಅಂತಹ ಸಾಮಾಜಿಕ ಕಳಕಳಿ ಇರುವ ವಿದ್ಯಾವಂತರು ಹಾಗೂ ದಾವಣಗೆರೆ ಜಿಲ್ಲೆಯ ಪ್ರತಿ ಸಮಸ್ಯೆಗಳನ್ನು ಆಲಿಸುತ್ತಾ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವಂಥವರು” ಎಂದರು.

“ಎಸ್ ಎಸ್ ಕೇರ್ ಟ್ರಸ್ಟ್‌ನ ಮುಖ್ಯಸ್ಥರಾಗಿರುವ ಅವರು ಟ್ರಸ್ಟ್ ವತಿಯಿಂದ ದಾವಣಗೆರೆ ಜಿಲ್ಲಾದ್ಯಂತ ಆರೋಗ್ಯ ತಪಾಸಣೆ, ಉಚಿತ ಶಿಬಿರ ಸೇರಿದಂತೆ ಬಡವರ, ಜನಸಾಮಾನ್ಯರ ಸೇವೆ ಮಾಡುತ್ತಿದ್ದು, ಸಂಸದರಾದಲ್ಲಿ ಇನ್ನೂ ಹೆಚ್ಚು ಸೇವೆ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಾರೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಪ್ರತಿ ಮನೆಮನೆಗೂ ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಸದಸ್ಯರು ಹೋಗಿ ಮತಯಾಚಿಸಬೇಕು. ಅವರ ಗೆಲುವಿಗೆ ಹಗಲಿರುಳು ಕೆಲಸ ಮಾಡೋಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಹಣಗೆರೆಕಟ್ಟೆ ಗ್ರಾಮದಲ್ಲಿ ಗೀತಾ ಶಿವರಾಜಕುಮಾರ್ ಚುನಾವಣೆ ಪ್ರಚಾರ

ಅಭಿಮಾನಿ ಬಳಗದ ಅಧ್ಯಕ್ಷೆ ಶುಭಮಂಗಳ, ಸದಸ್ಯರುಗಳಾದ ಚಂದ್ರಶೇಖರ್ ಡೋಲಿ, ವಿನೋಬನಗರದ ಸಂದೇಶ್ ನಾಯಕ್, ವಿನಯ್, ಮಹೇಶ್, ಮಹಮ್ಮದ್ ಫೈಝೋ, ಕಾಂಗ್ರೆಸ್‌ನ ಹಿರಿಯ ಮುಖಂಡರುಗಳಾದ ನಂಜಾನಾಯಕ್, ಗಣೇಶ ಹುಲ್ಮನಿ, ಸಾಗರ್ ಎಲ್‌ಎಂಎಚ್, ಪಾಲಿಕೆ ಸದಸ್ಯರುಗಳಾದ ಸುಧಾ ಇಟ್ಟಿಗುಡಿ, ಮೀನಾಕ್ಷಿ ಜಗದೀಶ್, ಮುಖಂಡರುಗಳಾದ ಮಂಜುನಾಥ್ ಇಟ್ಟಿಗುಡಿ, ಜಗದೀಶ್ ಭಾರತ್ ಕಾಲೋನಿ, ರಂಗನಾಥ ಬೋದಾಳ, ಪರಮೇಶ್ವರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...