ದಾವಣಗೆರೆ | ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Date:

ಹರಿಹರ ನಗರವು ಸಂಪೂರ್ಣ ಹಾಳಾಗಿ ಹೋಗಿದೆ. ನಗರದ ತುಂಬೆಲ್ಲ ಧೂಳು, ರಸ್ತೆಗಳಲ್ಲಿ ಗುಂಡಿಗಳು, ಅರ್ಧರ್ದ ತೆರೆದ ಚರಂಡಿಗಳು, ಕತ್ತಲೆ ಆವರಿಸಿದ ನಗರದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ಇದರಿಂದ ಸ್ಥಳೀಯರು ಪರದಾಡುತ್ತಿದ್ದಾರೆ ಎಂದು ದಾವಣಗೆರೆ ನಗರಸಭೆ ಅಧ್ಯಕ್ಷ ಸುರೇಶ್ ಚಂದಾಪುರ ಹೇಳಿದರು.

ದಾವಣಗೆರೆ ನಗರಸಭೆಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಜಿಲ್ಲಾಧಿಕಾರಿ ಭೇಟಿ ಮಾಡಿ ಹರಿಹರ ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ ನಡೆಸಿ ಮಾತನಾಡಿದರು.

ಹರಿಹರ ನಗರದ ಅಭಿವೃದ್ಧಿಗೆ ಕೂಡಲೇ ಸರ್ಕಾರದ ಅನುದಾನಗಳನ್ನು ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳಿಂದ ಸ್ಥಳೀಯ ನಿವಾಸಿಗಳು ಮುಕ್ತವಾಗಿ ನೆಮ್ಮದಿಯಿಂದ ಬದುಕುವಂತಾಗಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಉಪಾಧ್ಯಕ್ಷ ಕೆಜಿ ಸಿದ್ದೇಶ್‌ ಮಾತನಾಡಿ, “ಮುಂಜಾನೆ ಎದ್ದ ಕೂಡಲೇ ನಮ್ಮ ವಾರ್ಡಿಗೆ ಭೇಟಿ ಕೊಟ್ಟರೆ ಜನ ನಿತ್ಯವೂ ತಮ್ಮ ಸಂಕಷ್ಟಗಳನ್ನು ನಮ್ಮೆದುರು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ನಿತ್ಯ ಪ್ರಯತ್ನ ಪಡುತ್ತಿದ್ದೇವೆ” ಎಂದು ಹೇಳಿದರು.

“ನಾವು ನಮ್ಮ ವಾರ್ಡ್‌ ಮತ್ತು ನಗರವನ್ನು ಸುಂದರ ಹಾಗೂ ಉತ್ತಮ ಪರಿಸರವನ್ನಾಗಿ ನಿರ್ಮಾಣ ಮಾಡಬೇಕು. ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಸೌಲಭ್ಯ ಒದಗಿಸಬೇಕು. ಪ್ರತಿಯೊಂದು ವಾರ್ಡ್‌ಗಳಲ್ಲಿ ವಿದ್ಯುತ್ ದೀಪ, ಕುಡಿಯುವ ಶುದ್ಧ ನೀರು ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಜನರಿಗೆ ತಲುಪಿಸಬೇಕೆಂಬ ಕನಸು ಇಟ್ಟುಕೊಂಡು ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದೇವೆ” ಎಂದು ಅಬಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅನಾಥ ಶಿಶು ಪತ್ತೆ; ವಾರಸುದಾರರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ

“ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ತಾವು ಹರಿಹರ ನಗರಕ್ಕೆ ಭೇಟಿ ನೀಡಿ, ಅಲ್ಲಿನ ವಾತಾವರಣವನ್ನು ಪರಿಶೀಲಿಸಿ ಶೀಘ್ರದಲ್ಲೇ ಹರಿಹರ ನಗರವನ್ನು ಸುಂದರನ್ನಾಗಿ ಮಾಡುವುದಕ್ಕೆ ಸರ್ಕಾರದ ಅನುದಾನಗಳನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ನಗರಸಭಾ ಸದಸ್ಯ ಪಿ ಎನ್ ವಿರೂಪಾಕ್ಷಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಸುರೇಶ್ ಚಂದಾಪು‌ರ್ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...