ದಾವಣಗೆರೆ | ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯ ಕೊಲೆ; ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

Date:

ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮೊದಲ ಪತ್ನಿ, ಮಗ, ಆಕೆಯ ಅಣ್ಣ ಹಾಗೂ ತಂದೆ ಸೇರಿ ಮಚ್ಚಿನಿಂದ ತಲೆಗೆ ಹೊಡೆದು ಪತಿಯ ಕೊಲೆ ಮಾಡಿಸಿದ್ದರು. ಕೊಲೆ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಾವಣಗೆರೆ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಂಗಸ್ವಾಮಿ ಟಿ ಎನ್ ಮೈಕಲ್ ರಂಗ ಎಂಬಾತನನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ವಾಸಿಯಾದ ಹನುಮಂತಪ್ಪ ಜಮೀನಿನಲ್ಲಿ ಪಾಲು ಕೊಡಲಿಲ್ಲವೆಂದು ಇವರ ಮೊದಲ ಹೆಂಡತಿ ಆಶಾ ಮತ್ತು ಮಕ್ಕಳು ಆಕೆಯ ಅಣ್ಣ ರಂಗಸ್ವಾಮಿ, ಮಗ ಲಿಖಿತ್, ತನ್ನ ತಂದೆ ವಿ ಟಿ ನಾಗರಾಜಪ್ಪ ಸೇರಿ ಹನುಮಂತಪ್ಪನನ್ನು ಕೊಲೆ ಮಾಡುವ ಸಂಚು ರೂಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಸ್ವಾಮಿಯು 2024ರ ನವೆಬಂರ್ 28ರಂದು ಬೆಳಿಗ್ಗೆ ಸುಮಾರು7ರ ಸಮಯದಲ್ಲಿ ಅಜ್ಜಿಹಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕಿನಲ್ಲಿದ್ದ ಹನುಮಂತಪ್ಪನನ್ನು ಹಿಂಬಾಲಿಸಿಕೊಂಡು ಹೋಗಿ ಮಚ್ಚಿನಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದನು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಹನುಮಂತಪ್ಪನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ರಂಗಸ್ವಾಮಿ ಟಿ ಎನ್ ಮೈಕಲ್ ರಂಗ ಎಂಬಾತನ ಪತ್ತೆಗೆ ಬಲೆ ಬೀಸಲಾಗಿತ್ತು. ಆರೋಪಿ ಸಿಕ್ಕಿರಲಿಲ್ಲ, ಇದೀಗ ಪೊಲೀಸರ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಆರೋಪಿ ಬಂಧಿಸಿದ ಚನ್ನಗಿರಿ ಪೊಲೀಸರಿಗೆ ಎಸ್‌ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...