ದಾವಣಗೆರೆ | ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿಗೆ ಆಗ್ರಹ; ನ.10ಕ್ಕೆ ರಸ್ತೆ ತಡೆ ಪ್ರತಿಭಟನೆ

Date:

ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದ್ದು, ನವೆಂಬರ್ 10ರಂದು ಬೆಂಗಳೂರು -ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಮಾಡುವುದಾಗಿ ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “2ಎ ಮೀಸಲಾತಿ ಜೊತೆ ಲಿಂಗಾಯತ ಉಪಪಂಗಡ ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸುತ್ತೇವೆ. ಹಿಂದಿನ ಸರ್ಕಾರ ಮೀಸಲಾತಿ ಘೋಷಣೆ ಮಾಡಿತು. ಆದರೆ, ನೀತಿ ಸಂಹಿತೆ ಹಿನ್ನಲೆ ಜಾರಿಯಾಗಲಿಲ್ಲ. 2ಡಿ ಮೀಸಲಾತಿ ಆಗ ಅನುಷ್ಠಾನಕ್ಕೆ ಮಾಡಲು ಸಾಧ್ಯವಾಗಲಿಲ್ಲ. ಈಗಿನ ಸರ್ಕಾರಕ್ಕೂ ಕೂಡ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಲಾಗುವುದು” ಎಂದರು.

“ಹೋರಾಟದ ಮೂಲಕ ಮೀಸಲಾತಿ ಪಡೆಯಬೇಕು. ಈಗಿನ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಾಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂತು ಇಷ್ಟಲಿಂಗ ಪೂಜೆ ಮಾಡಿ ಹೋರಾಟ ಆರಂಭಿಸುತ್ತೇವೆ. ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಮನವಿ ಮಾಡುತ್ತೇವೆ. ಲೋಕಸಭಾ ಚುನಾವಣೆಯ ಒಳಗೆ ನಮಗೆ ಮೀಸಲಾತಿ ನೀಡಬೇಕು. ಇಲ್ಲದಿದ್ದಲ್ಲಿ ಲೋಕಸಭಾ ಚುನಾವಣೆಗೆ ಬಹಳ ಹೊಡೆತ ಬೀಳುತ್ತದೆ. ಎಲ್ಲ ಕಡೆ ಸಭೆ ಮಾಡಿ‌ ಜಾಗೃತಿ ಮೂಡಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಾಲೆಯಲ್ಲಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ: ಜಿಲ್ಲಾಧಿಕಾರಿ ವೆಂಕಟೇಶ್

“ಸರ್ಕಾರ ಜಾತಿಗಣತಿ ಬಿಡುಗಡೆ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ, ಲಿಂಗಾಯತ, ಒಕ್ಕಲಿಗ ಸಮಾಜದ ಜನರಲ್ಲಿ ಆತಂಕ ಇದೆ. ಸರ್ಕಾರ ಎರಡು ಸಮಾಜದ ಶಾಸಕರನ್ನು ಸೇರಿಸಿ ಸಭೆ ಮಾಡಿ ಮನವರಿಕೆ ಮಾಡಿಕೊಳ್ಳಲಿ. ಲಿಂಗಾಯತ ಒಳಪಂಗಡದವರು ಎಲ್ಲಿ ಸೌಲಭ್ಯ ಕಟ್ ಆಗುತ್ತದೆಂದು ಲಿಂಗಾಯತ ಎಂದು ಬರೆಸಿಲ್ಲ. ಇದರಿಂದ ಸಂಖ್ಯೆ ಕಡಿಮೆಯಾಗಿರುವ ಆತಂಕವಿದೆ” ಎಂದರು.

“2ಎ ಮೀಸಲಾತಿ ಬಗ್ಗೆ ಜಯಪ್ರಕಾಶ್ ಹೆಗಡೆಯವರ ಮಧ್ಯಂತರ ವರದಿ ನಮ್ಮ‌ ಪರವಾಗಿ ಬಂದಿದೆ. 2ಎ ಮೀಸಲಾತಿಯಿಂದ ಯಾವ ಜಾತಿಗಳಿಗೂ ಅನ್ಯಾಯವಾಗುವುದಿಲ್ಲ. ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ನೀಡಿ” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...