ದಾವಣಗೆರೆ | ಬಿಜೆಪಿಯೊಂದಿಗೆ ಹೊಂದಾಣಿಕೆ ರಾಜಕಾರಣ; ಉಸ್ತುವಾರಿ ಸಚಿವರ ವಿರುದ್ಧ ಶಾಸಕ ಬಸವರಾಜ್ ಶಿವಗಂಗಾ ಆರೋಪ

Date:

ದಾವಣಗೆರೆ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿಯೊಂದಿಗಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬೆಳಗಾವಿಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಆಕ್ರೋಶ ಹೊರ ಹಾಕಿದ್ದು, “ದಾವಣಗೆರೆಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆಯ ನಂತರ ಮತ್ತು ಹಿಂದಿನಿಂದಲೂ ಹೊಗೆಯಾಡುತ್ತಿದ್ದ ಅಸಮಾಧಾನದ ರಾಜಕಾರಣ ಈಗ ಮತ್ತೊಮ್ಮೆ ಹೊರಬಿದ್ದಿದೆ” ಎಂದಿದ್ದಾರೆ.

ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಸೋಲಿನ ಹಿನ್ನೆಲೆಯಲ್ಲಿ ಚೆನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಬೆಳಗಾವಿ ಅಧಿವೇಶನದಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ಅವರ ಮನೆ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ. ಅವರಿಗೆ ಪಕ್ಷವೂ ಬೇಕಿಲ್ಲ. ಶಾಸಕರೂ ಬೇಕಿಲ್ಲ. ಅವಶ್ಯಕತೆಯೂ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲವನ್ನೂ ಸಹಿಸಿಕೊಂಡು ಹೋಗುತ್ತಿದ್ದೇವೆ. ಇನ್ನು ಎಷ್ಟು ಅಂತ ಸಹಿಸಿಕೊಳ್ಳಲು ಸಾಧ್ಯ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ಚನ್ನಗಿರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಲಲು ಸಚಿವರೇ ಕಾರಣ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಚುನಾವಣೆ ಎಂದಮೇಲೆ ಸೋಲು ಗೆಲುವು ಸಹಜ. ಸೋಲು ನಾವು ಒಪ್ಪಿಕೊಳ್ಳುತ್ತೇವೆ. ನಮ್ಮವರಿಂದಲೇ ನಾವು ಸೋತರೆ ನಮಗೆ ಹೇಗಾಗಬೇಡ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಂದಾಯ ಭೂಮಿ, ಅರಣ್ಯಕ್ಕೆ ಸೇರಿದೆನ್ನುವ ಹುನ್ನಾರ; ಮರ ತೆರವುಗೊಳಿಸಲು ಅರಣ್ಯ ಅಧಿಕಾರಿಗಳಿಗೆ ಗಡುವು

“ದಾವಣಗೆರೆ ಜಿಲ್ಲೆಯಲ್ಲಿ ಸಚಿವರು ಬಿಜೆಪಿಯ ಕೆಲವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿರುವ ಕುರಿತಂತೆ ಸಿಎಂ, ಡಿಸಿಎಂ ಗಮನಕ್ಕೆ ತಂದಿದ್ದೇನೆ. ಸಿಎಂ ಸಿದ್ದರಾಮಯ್ಯನವರುರು ಪತ್ರಕ್ಕೆ ಬೆಲೆ ನೀಡುತ್ತಾರೆಂಬ ವಿಶ್ವಾಸವಿದೆ. ನಮ್ಮದು ಬಿಸಿರಕ್ತ. ಏನು ನಡೆಯುತ್ತೋ ಅದನ್ನೇ ಹೇಳುತ್ತೇವೆ. ಬಕೆಟ್ ಹಿಡಿಯುವ ರಾಜಕಾರಣ ಮಾಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನಡೆ ಬಗ್ಗೆ ಪತ್ರ ಬರೆಯಲೇಬೇಕಿತ್ತು, ಬರೆದಿದ್ದೇನೆ” ಎಂದು ತಿಳಿಸಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...