ದಾವಣಗೆರೆ | ಅತ್ಯಾಚಾರ ಆರೋಪ; ತಲೆ ಮರೆಸಿಕೊಂಡಿದ್ದ ಪಾದ್ರಿ ಬಂಧನ

Date:

ಶಿಕ್ಷಕಿಯೊಬ್ಬರನ್ನು ವಂಚಿಸಿ ಅತ್ಯಾಚಾರವೆಸಗಿದ ಆರೋಪದಡಿ ದಾವಣಗೆರೆ ನಗರದ ಜಯನಗರ ಬಡಾವಣೆಯ ಡಿಎಚ್‌ಎಂ ಚರ್ಚ್ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾದ್ರಿ ರಾಜಶೇಖರ್(58) ಬಂಧಿತ ಆರೋಪಿ. ಅತ್ಯಾಚಾರವೆಸಗಿ ವಂಚಿಸಿದ್ದಾರೆಂದು ಆರೋಪಿಸಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸೆಕ್ಷನ್ 376,(2) (2), 354(2), 323, 504, 506, 417, 420 ಪ್ರಕರಣ ದಾಖಲಾಗಿತ್ತು. ಕೃತ್ಯವೆಸಗಿ ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪಾದ್ರಿಯ ಮೊಬೈಲ್‌ ಲೊಕೇಷನ್ ಆಧರಿಸಿ ಹೈದರಾಬಾದ್‌ನಲ್ಲಿ ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದಾಗಿ ತಿಳಿದುಬಂದಿದೆ.

58ರ ಇಳಿ ವಯಸ್ಸಿನ ಪಾದ್ರಿ ಪಿ ರಾಜಶೇಖರ್ ಕೃತ್ಯ‌ ಎಸಗಿದ್ದಾನೆಂದು ಆರೋಪಿಸಲಾಗಿದೆ. ಪಾದ್ರಿಯ ಕೃತ್ಯ ಇದೇ ಮೊದಲೇನಲ್ಲ. ಈ ಹಿಂದೆ ಚರ್ಚೆಗೆ ಬರುತ್ತಿದ್ದ ಹಲವು ಸ್ತ್ರೀಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆರೋಪಗಳು ಕೇಳಿಬಂದಿದ್ದವು. ಪಾದ್ರಿಯ ವಿಕೃತ ಕಾಮುಕತನಕ್ಕೆ ಆತನ ಪುತ್ರಿಯೇ ಪಾದ್ರಿ ವಿರುದ್ಧ ಸುದ್ದಿಗೋಷ್ಟಿ ನಡೆಸಿ, ಅನ್ಯ ಸ್ತ್ರೀಯರ ಜತೆಗೆ ಅಸಭ್ಯವಾಗಿ ವರ್ತಿಸುತ್ತಾರೆಂದು ಆರೋಪಿಸಿದ್ದರು. ಇದಷ್ಟೇ ಅಲ್ಲದೆ ಚರ್ಚ್‌ಗೆ ಬರುವ ಆರೇಳು ಮಂದಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನೂ ಎಸಗಿದ್ದಾರೆಂದು ಪಾದ್ರಿ ಮಗಳು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರು ಮಂದಿ ಮಹಿಳೆಯರಿಗೆ ಹೀಗೆ ಮಾಡಿದ್ದಾರೆಂದು ಸ್ವತಃ ಅವರ ಮಗಳೇ ಗಂಭೀರ ಆರೋಪ ಮಾಡಿದ್ದರು. ಪಾದ್ರಿ ರಾಜಶೇಖರ್ ವರ್ತನೆ ಬಗ್ಗೆ ಮಹಿಳೆಯರು ಅವರ ಮಗಳ ಬಳಿ ಸಂಕಟ ತೋಡಿಕೊಂಡಿದ್ದರು. ಇದೀಗ ಓರ್ವ ಶಿಕ್ಷಕಿಗೂ ಅನ್ಯಾಯ ಮಾಡಿದ್ದಾರೆ. ಆ ಶಿಕ್ಷಕಿಯ ಸರ್ವಿಸ್ ರಿಜಿಸ್ಟರ್‌ನಲ್ಲಿ ನಾಮಿನಿಯಾಗಿ ರಾಜಶೇಖರ್ ಹೆಸರು ಇರುವ ದಾಖಲೆಯೂ ಇದೆ ಎಂಬುದು ಮಗಳ ಆರೋಪವಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜಾ ಅಮರೇಶ್ವರ ನಾಯಕರಿಂದ ಜಾತಿ ದುರ್ಬಳಕೆ ಆರೋಪ; ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ

ಪಾದ್ರಿ ರಾಜಶೇಖರ್ ವಿರುದ್ದ ದೂರು ಕೊಡುವುದಕ್ಕೆ ದಾವಣಗೆರೆ ಕ್ರಿಶ್ಚಿಯನ್ ಸಂಘಟನೆಗಳು ಮುಂದಾಗಿವೆ. ದಲಿತ ಮಹಿಳೆಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಕೊಂಡು ಮದುವೆಯಾಗುತ್ತಿದ್ದಾನೆಂದು ಬಂಜಾರ ಸಮಾಜ ಕೂಡ ಆರೋಪ ಮಾಡಿತ್ತು. ಪಾದ್ರಿ ರಾಜಶೇಖರ್ ಹಿಂದಿನಿಂದ ಇಂಥ ಕೃತ್ಯಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಆದರೆ ಯಾರೂ ದೂರು ದಾಖಲು ಮಾಡಿರಲಿಲ್ಲ. ದೂರು ದಾಖಲಾದ ಬಳಿಕ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಆರೋಪಿಯು ಈಗ ಬಂಧನಕ್ಕೊಳಗಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...